ಸಮಾನ ಅವಕಾಶ ಕಲ್ಪಿಸಲು ಒತ್ತಾಯ

ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಲಿಂಗತ್ವ ಅಲ್ಪಸಂಖ್ಯಾತರು ಪ್ರತಿಭಟನೆ ನಡೆಸಿದರು.
ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಲಿಂಗತ್ವ ಅಲ್ಪಸಂಖ್ಯಾತರು ಪ್ರತಿಭಟನೆ ನಡೆಸಿದರು.
Published on
ಬೆಳಗಾವಿ: ಲಿಂಗತ್ವ ಅಲ್ಪಸಂಖ್ಯಾತರ (ಹಕ್ಕುಗಳ ಸಂರಕ್ಷಣೆ) ತಿದ್ದುಪಡಿ ಮಸೂದೆ-2026 ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ನಗರದಲ್ಲಿ ಸೋಮವಾರ ಲಿಂಗತ್ವ ಅಲ್ಪಸಂಖ್ಯಾತರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ನಗರದ ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಲಿಂಗತ್ವ ಅಲ್ಪಸಂಖ್ಯಾತರು ಶಕ್ತಿ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಸಂಚಾರಕ್ಕೆ ಸಮಾನ ಅವಕಾಶ ಕೊಡಬೇಕು. ಸರ್ಕಾರದಿಂದ ಮಹಿಳೆಯರಿಗೆ ಸಿಗುತ್ತಿರುವ ಸೌಲಭ್ಯ ಲಿಂಗತ್ವ ಅಲ್ಪಸಂಖ್ಯಾತರಿಗೂ ಕಲ್ಪಿಸಬೇಕು.
ನಗರ ಮತ್ತು ಗ್ರಾಮೀಣ ಭಾಗದ ಸಾರಿಗೆ ಬಸ್‌ಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಹೀಗಾಗಿ ಗೌರವದಿಂದ ವರ್ತಿಸಲು ಸಾರಿಗೆ ಸಂಸ್ಥೆ ನೌಕರರಿಗೆ ತರಬೇತಿ ಕೊಡಬೇಕು. ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಾರಿಗೆ ಅಧಿಕಾರಿ, ಸಿಬ್ಬಂದಿ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಭ್ರಷ್ಟಾಚಾರ ತನಿಖೆಗೆ ಆಗ್ರಹ

ಬೆಳಗಾವಿ ತಾಲೂಕಿನ ಬಿಜಗರ್ಣಿ ಗ್ರಾಪಂ ವ್ಯಾಪ್ತಿಯಲ್ಲಿನ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿರುವುದು ಕುರಿತು ಜಿಪಂಗೆ ಮಾಹಿತಿ ನೀಡಲಾಗಿದೆ. ಆದರೂ ಯಾವುದೇ ಕ್ರಮ ವಹಿಸಿಲ್ಲ. ಆದ್ದರಿಂದ ಏ.27ರಂದು ಗ್ರಾಪಂಗೆ ಬೀಗ
ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net