ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಬೆಳಗಾವಿಯಲ್ಲಿ ಬುಧವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟಿಸಲಾಯಿತು.
ಬೆಳಗಾವಿಯಲ್ಲಿ ಬುಧವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟಿಸಲಾಯಿತು.
Published on
ಬೆಳಗಾವಿ: ಪ್ರಸಕ್ತ ಬಜೆಟ್‌ನಲ್ಲಿ ದಲಿತ ಸಮುದಾಯದ ಶ್ರೇಯೋಭೀವೃದ್ಧಿಗಾಗಿ ಶೇ.24.1ರಷ್ಟು ಅನುದಾನ ಹಣವನ್ನು ಮೀಸಲಿಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಬುಧವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. 
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ಕಾರ್ಯಕರ್ತರು, ಪ್ರಮುಖ ಬೇಡಿಕೆಗಳುಳ್ಳ ಮನವಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು. 
ಒಳ ಮೀಸಲಾತಿ ಅನುಷ್ಠಾನದಲ್ಲಿ ಸೃಷ್ಟಿಯಾಗಿರುವ ರೋಸ್ಟರ್ ಬಿಂದು ಗೊಂದಲ ಸರಿಪಡಿಸಬೇಕು. ನಾಗರಿಕ ಹಕ್ಕುಗಳ ರಕ್ಷಣೆ ಮತ್ತು ದೌರ್ಜನ್ಯ ತಡೆ ಕಾಯ್ದೆ ಅಡಿ ವಿಚಾರಣೆಗಳ ಮೇಲೆ ನಿಗಾವಹಿಸಲು ಪ್ರತ್ಯೇಕ ಸಮಿತಿ ರಚಿಸಬೇಕು. ಪ್ರತಿ ಗ್ರಾಮದಲ್ಲಿ ದಲಿತರಿಗೆ ಕಡ್ಡಾಯವಾಗಿ ಸ್ಮಶಾನ ಭೂಮಿ ಮೀಸಲಿಡಬೇಕು. ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಖಾಸಗಿ ಕ್ಷೇತ್ರಗಳಲ್ಲೂ ಮೀಸಲಾತಿ ಜಾರಿಗೊಳಿಸಬೇಕು. ಎಸ್‌ಸ್ಸಿ, ಎಸ್ಟಿ ಸಮುದಾಯದ ಬಾಕಿ ಇರುವ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಮಾಡಬೇಕು. ಫಾರಂ 57ರ ಅಡಿಅರ್ಜಿ ಸಲ್ಲಿಸಿದವರಿಗೆ ಸಾಗುವಳಿ ಚೀಟಿ ಹಾಗೂ ಹಕ್ಕುಪತ್ರ ವಿತರಿಸಬೇಕು. ಹಾಸ್ಟೆಲ್‌ಗಾಗಿ ಅರ್ಜಿ ಸಲ್ಲಿಸುವ ಎಲ್ಲ  ಎಸ್ಸಿ,ಎಸ್ಟಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು ಎಂದು ಆಗ್ರಹಿಸಿದರು. 
ಜಿಲ್ಲಾ ಸಂಚಾಲಕ ರುದ್ರಪ್ಪ ನಿಂಗಣ್ಣವರ, ಸಂಘಟನಾ ಸಂಚಾಲಕರಾದ ಅರ್ಜುನ ಕಾಂಬಳೆ, ಪ್ರಕಾಶ ಮರಡಿ, ಅಶೋಕ ಅಪ್ಪುಗೋಳ, ಬಾಬು ಕಾಂಬಳೆ, ಶಿವಾಜಿ ಭಲೋಗಿ, ಚಂದ್ರಕಾಂತ ಕಾಂಬಳೆ, ಕಲ್ಲಪ್ಪ ತಳವಾರ ಇತರರಿದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net