ಹೊಸ ಕನಿಷ್ಠ ವೇತನ ಜಾರಿಗೆ ಆಗ್ರಹ

ಬೆಳಗಾವಿಯಲ್ಲಿ ಬುಧವಾರ  ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದಿಂದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ಗೆ ಮನವಿ ಸಲ್ಲಿಸಲಾಯಿತು. ಪ್ರದೀಪ ದಳವಾಯಿ, ಲಕ್ಕಪ್ಪ ಕಾಂಬಳೆ, ಶ್ರೀಕಾಂತ ಸಣ್ಣಕ್ಕಿ ಇತರರಿದ್ದರು.
ಬೆಳಗಾವಿಯಲ್ಲಿ ಬುಧವಾರ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದಿಂದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ಗೆ ಮನವಿ ಸಲ್ಲಿಸಲಾಯಿತು. ಪ್ರದೀಪ ದಳವಾಯಿ, ಲಕ್ಕಪ್ಪ ಕಾಂಬಳೆ, ಶ್ರೀಕಾಂತ ಸಣ್ಣಕ್ಕಿ ಇತರರಿದ್ದರು.
Published on

ಹೊಸ ಕನಿಷ್ಠ ವೇತನ ಜಾರಿ, ಸೇವೆ ಕಾಯಂ, ಸೇವಾ ಭದ್ರತೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಸಮಿತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ‌್ಯಾಲಿಯಲ್ಲಿ ಆಗಮಿಸಿದ ನೌಕರರು, ಡಿಸಿ ಕಚೇರಿ ಎದುರು ತಮ್ಮ ಬೇಡಿಕೆಗೆ ಸ್ಪಂದಿಸದ ಅಧಿಕಾರಿ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕಾರ್ಮಿಕ ಇಲಾಖೆ ಅಧಿಸೂಚನೆ ಅನ್ವಯ ಹೊಸ ಕನಿಷ್ಠ ವೇತನ ನೀತಿ ತಕ್ಷಣ ಜಾರಿಗೊಳಿಸಬೇಕು. ಹೊರಗುತ್ತಿಗೆ ನೌಕರರ ಜಿಲ್ಲಾ ಕಾರ್ಮಿಕ ಸಹಕಾರ ಸಂಘಗಳನ್ನು ಜಿಲ್ಲಾಕಾರಿಗಳ ಅಧ್ಯಕ್ಷತೆಯಲ್ಲಿ ಪ್ರಾರಂಭಿಸಿ, ಈ ಮೂಲಕವೇ ನೌಕರರಿಗೆ ವೇತನ ಪಾವತಿಯಾಗಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಸುಪ್ರೀಂಕೋರ್ಟ್ ಆದೇಶ ಪಾಲನೆಯಾಗಬೇಕು. ಕಾನೂನು ಪ್ರಕಾರ ಕಡ್ಡಾಯ ರಜೆ ನೀಡಬೇಕು. ಹಿಂದುಳಿದ ವರ್ಗಗಳ ಮತ್ತು ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳಲ್ಲಿ ಕಡಿತ ಮಾಡಿರುವ ಸಿಬ್ಬಂದಿ ಸಂಖ್ಯೆ ಪುನಃ ಹೆಚ್ಚಿಸಬೇಕು. ಹೊರಗುತ್ತಿಗೆ ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆ ನೀಡಬೇಕು. ವಸತಿ ನಿಲಯ ಮತ್ತು ವಸತಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಿ ಗ್ರೂಪ್ ನೌಕರರಿಗೆ ಕಾರ್ಮಿಕ ಕಾಯ್ದೆ ಪ್ರಕಾರ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.
ಪ್ರದೀಪ ದಳವಾಯಿ, ಲಕ್ಕಪ್ಪ ಕಾಂಬಳೆ, ಶ್ರೀಕಾಂತ ಸಣ್ಣಕ್ಕಿ, ರವಿ ಕಾಂಬಳೆ, ಕುಮಾರ ಮಾಂಗ, ಮುಬಾರಕ್ ನದಾಫ್, ಮುತ್ತುರಾಜ ಕಾಂಬಳೆ, ರಮೇಶ ಪಾಟೀಲ, ವಿನೋದ ಸಾರವಾಡೆ,ರಾಜಶ್ರೀ ಪಾಟೀಲ, ಸಂತೋಷ ಮಾದರ, ಅರುಣ ಬನ್ನಿ, ಮಂಜುನಾಥ ಉಪಾರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net