ಹಿರೇಬಾಗೇವಾಡಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಗರಿಕರು ಸ್ಥಳೀಯ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಭಿಷೇಕ ಪಾಂಡೆಗೆ ಬುಧವಾರ ಮನವಿ ಸಲ್ಲಿಸಿದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ತ್ಯಾಜ್ಯ ಬಿದ್ದು ದುರ್ವಾಸನೆ ಬೀರುತ್ತಿದ್ದು, ಜನರಲ್ಲಿ ಸಾಂಕ್ರಾಮಿಕ ರೋಗ ಭೀತಿ ಶುರುವಾಗಿದೆ. ಬೀದಿ ನಾಯಿಗಳ ಹಾವಳಿಯಿಂದ ಜನರು ಭಯದಲ್ಲಿ ಓಡಾಡುವಂತಾಗಿದೆ. ಜತೆಗೆ ಸಮರ್ಪಕ ನೀರು ಪೂರೈಕೆಯಾಗುತ್ತಿಲ್ಲ. ಸಮರ್ಪಕ ಬೀದಿ ದೀಪ ಹಾಗೂ ಉತ್ತಮ ರಸ್ತೆ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು. ಇಲ್ಲವಾದಲ್ಲಿ ತೀವ್ರ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.