ಟನ್ ಕಬ್ಬಿಗೆ 5,500 ದರ ನಿಗದಿಗೆ ಒತ್ತಾಯ

ಸಂಘದ ಅಧ್ಯಕ್ಷ ಚೂನಪ್ಪ ಪೂಜೇರಿ, ಗೌರವಾಧ್ಯಕ್ಷ ಶಶಿಕಾಂತ ಪಡಸಲಗಿ ಗುರೂಜಿ, ಪ್ರಕಾಶ ನಾಯಿಕ ಇತರರಿದ್ದರು.
ಸಂಘದ ಅಧ್ಯಕ್ಷ ಚೂನಪ್ಪ ಪೂಜೇರಿ, ಗೌರವಾಧ್ಯಕ್ಷ ಶಶಿಕಾಂತ ಪಡಸಲಗಿ ಗುರೂಜಿ, ಪ್ರಕಾಶ ನಾಯಿಕ ಇತರರಿದ್ದರು.
Published on
ಬೆಳಗಾವಿ: ಪ್ರತಿ ಟನ್ ಕಬ್ಬಿಗೆ 5,500 ರೂ. ನೀಡುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಲ್ಲಿನ ಅಲಾರವಾಡ ಸೇತುವೆ ಬಳಿ ಗುರುವಾರ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಬಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಬ್ಬು ಬೆಳೆಯುವ ರೈತರಿಗೆ ನ್ಯಾಯಯುತ ದರ ನೀಡಬೇಕು. ತೂಕದಲ್ಲಿ ಆಗುತ್ತಿರುವ ಮೋಸ ತಪ್ಪಿಸಲು ರಾಜ್ಯದ ಎಲ್ಲ ಕಾರ್ಖಾನೆಗಳಲ್ಲಿ ಸರ್ಕಾರದ ವತಿಯಿಂದ ಡಿಜಿಟಲ್ ತೂಕದ ಯಂತ್ರ ಅಳವಡಿಸಬೇಕು. ಸಕ್ಕರೆ ಆಯುಕ್ತರ ಕಚೇರಿಗೆ ಮುಖ್ಯಸ್ಥರಾಗಿ ಐಎಎಸ್ ಅಧಿಕಾರಿ ನೇಮಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾ ಸ್ಥಳಕ್ಕಾಗಮಿಸಿ ಮನವಿ ಆಲಿಸಿದ ಸಕ್ಕರೆ ಸಚಿವ ಶಿವಾನಂದ ಪಾಟೀಲ ರೈತರ ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ. ಗುರ್ಲಾಪುರ ಕ್ರಾಸ್‌ನಲ್ಲಿ ನಡೆದ ಹೋರಾಟದಲ್ಲಿ ರೈತರು ಸಂಯಮ ಪ್ರದರ್ಶಿಸಿ ನ್ಯಾಯ ಪಡೆದರು. ಆ ಹೋರಾಟದಿಂದ ಇಡೀ ರಾಜ್ಯದ ರೈತರಿಗೆ ಸಹಾಯವಾಗಿದೆ. ಇಳುವರಿ ಆಧರಿಸಿ ಕಬ್ಬಿಗೆ ದರ ನೀಡುವ ಪ್ರಯತ್ನ ಸರ್ಕಾರ ಮಾಡಿದೆ ಎಂದರು.
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ಮಾತನಾಡಿದರು. ಚೂನಪ್ಪ ಪೂಜೇರಿ, ಶಶಿಕಾಂತ ಗುರೂಜಿ, ಪ್ರಕಾಶ ನಾಯಿಕ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net