ಡಿಸಿಸಿ ಬ್ಯಾಂಕ್ ನಿರ್ದೇಶಕರ ಅನರ್ಹಗೊಳಿಸಲು ಆಗ್ರಹ

dcc babk belagavi
dcc babk belagavi
Published on
ಬೆಳಗಾವಿ: ರಾಜ್ಯದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ)ಗಳಲ್ಲಿ ನಿರ್ದೇಶಕರಾಗಿ 10 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸುತ್ತಿರುವವರನ್ನು ಅನರ್ಹಗೊಳಿಸಲು ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ ಆಗ್ರಹಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಿಸರ್ವ್ ಬ್ಯಾಂಕ್ ಕಾಯ್ದೆ ಅನ್ವಯ ಸಹಕಾರ ಬ್ಯಾಂಕ್‌ಗಳಲ್ಲಿ 10 ವರ್ಷ ಮಾತ್ರ ನಿರ್ದೇಶಕರಾಗಿರಲು ಅವಕಾಶವಿದೆ. ಈ ಹಿನ್ನೆಲೆ 10 ವರ್ಷಕ್ಕಿಂತ ಮೇಲ್ಪಟ್ಟ ನಿರ್ದೇಶಕರನ್ನು ಅರ್ನಹಗೊಳಿಸಲು ಮುಖ್ಯಮಂತ್ರಿ, ಮುಖ್ಯಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ.
ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಕಾನೂನು ಹೋರಾಟ ನಡೆಸಲಾಗುವುದು ಎಂದರು. ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿಗೆ ಈಚೆಗೆ ಆಯ್ಕೆಯಾಗಿರುವ ನಿರ್ದೇಶಕರ ಪೈಕಿ 7 ಜನರು ಹತ್ತು ವರ್ಷಕ್ಕಿಂತ ಹೆಚ್ಚು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಅವರ ಸ್ಥಾನ ಅನರ್ಹಗೊಳಿಸಲು ಆಗ್ರಹಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net