ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಬೆಳಗಾವಿ ತಾಲೂಕಿನ ಬಡಸ ಕೆಎಚ್ ಕ್ರಾಸ್ ಬಳಿ ಬೆಂಬಲಿಗರು ಗುರುವಾರ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ಮನ್ಸೂರ್‌ಅಲಿ ಅತ್ತಾರ, ಅಶೋಕ ಅಂಗಡಿ, ಪರ್ವತಗೌಡ ಪಾಟೀಲ, ರಮೇ ಮೇಳೆದ, ಪ್ರಕಾಶ ಪಾಟೀಲ ಇತರರಿದ್ದರು.

Published on

ಬೆಳಗಾವಿ :

ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಬೆಂಬಲಿಗರು ಗುರುವಾರು ತಾಲೂಕಿನ ಬಡಸ ಕೆಎಚ್ ಕ್ರಾಸ್ ಬಳಿ ಅರೆಬೆತ್ತಲೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷ ಸಂಘಟನೆ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ನೀಡದೇ ಇರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿ ಪಕ್ಷದ ನಾಯಕತ್ವದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮೀಣ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿದ್ದಾರೆ. ಈ ಹಿಂದೆ ನೀಡಲಾದ ಸಚಿವ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಹೀಗಾಗಿ ಇವರ ರಾಜಕೀಯ ಹಾಗೂ ಸಂಘಟನಾ ಸಾಮರ್ಥ್ಯಕ್ಕೆ ಸೂಕ್ತ ಮನ್ನಣೆ ನೀಡಬೇಕು. ಇಲ್ಲದಿದ್ದರೆ ಪ್ರತಿಭಟನೆ ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಮನ್ಸೂರ್‌ಅಲಿ ಅತ್ತಾರ, ಅಶೋಕ ಅಂಗಡಿ, ಪರ್ವತ ಗೌಡ ಪಾಟೀಲ, ರವಿ ಮೇಳೆದ, ಪ್ರಕಾಶ ಪಾಟೀಲ, ಬಸವಂತ ನಾಯಕ ಇತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net