ಚಿಕ್ಕೋಡಿ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ನಾರಿಶಕ್ತಿ ವಂದನ ಮಸೂದೆ ಬದಲಾಗಿ ೨೦೨೩ರ ಮಹಿಳಾ ಮೀಸಲಾತಿ ಕೂಡಲೇ ಜಾರಿಗೊಳಿಸಬೇಕು ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಆಗ್ರಹಿಸಿದರು.
ಪಟ್ಟಣದ ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜೀವ್ ಗಾಂಧಿ ಪ್ರದಾನಮಂತ್ರಿಯಾಗಿದ್ದ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.೩೩ ಮೀಸಲಾತಿ ತರಲಾಗಿತ್ತು. ಮಹಿಳಾ ವಿರೋಧಿ ಎಂಬ ಬಿಜೆಪಿ, ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.
ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳಾ ಮೀಸಲಾತಿ ತರುವ ಮಸೂದೆಯನ್ನು ತರಾತುರಿಯಲ್ಲಿ ಮಂಡಿಸಿದ್ದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಮಣಿಪುರ, ಉತ್ತರ ಪ್ರದೇಶ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದರೂ ಅದನ್ನು ವಿರೋಽಸುವ ಗೋಜಿಗೆ ಹೋಗದ ಬಿಜೆಪಿ ಮಹಿಳೆಯರ ಕಾಳಜಿ ತೋರುವ ಬಣ್ಣ ಕಳಚಿದಂತಾಗಿದೆ ಎಂದರು.
ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಮಾತನಾಡಿ, ಮಹಿಳಾ ಮೀಸಲಾತಿ ಮಸೂದೆಯೊಂದಿಗೆ ಕ್ಷೇತ್ರ ಮರು ವಿಂಗಡಣೆ ಮಾಡಲು ಹೊರಟಿದ್ದ ಬಿಜೆಪಿ ಸರ್ಕಾರದ ಕ್ರಮ ಸಂಶಯಕ್ಕೆ ಎಡೆ ಮಾಡಿಕೊಡುವಂತಿತ್ತು. ಹೀಗಾಗಿ, ಸಂಸತ್ತಿನಲ್ಲಿ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳು ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿದ್ದವು. ಕಾಂಗ್ರೆಸ್ ಮಹಿಳೆಯರ ಪರವಾಗಿದೆ ಎಂಬುವುದಕ್ಕೆ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ತಂದಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ' ಎಂದು ಹೇಳಿದರು.
ಚಿಕ್ಕೋಡಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲಾ ಪಾಟೀಲ, ಗಣೇಶ ಮೋಹಿತೆ, ಮುಖಂಡ ಪ್ರಭಾಕರ ಕೋರೆ, ತನುಜಾ ಸಿಂಗೆ, ಲಕ್ಷಿ÷್ಮÃ ಪಾಟೀಲ, ರೇಖಾ ದಾದುಗೋಳ, ರಾಜು ಕೊಟಗಿ ಇತರರಿದ್ದರು.