ಕಾಲೇಜಿಗೆ ಮೂಲಸೌಕರ್ಯ ಒದಗಿಸಲು ಆಗ್ರಹ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪ್ರತಿಭಟನೆ ಸ್ಥಳಕ್ಕೆ  ಬಾಬಾಸಾಹೇಬ ಪಾಟೀಲ ಭೇಟಿ ನೀಡಿದರು.  ಕಲಗೌಡ ಪಾಟೀಲ, ಶಿವಾನಂದ ಗುಡುಗನಟ್ಟಿ, ಪ್ರವೀಣ ಗಂಗೋಳ, ಎಂ.ಎ್.ಜಕಾತಿ ಇತರರಿದ್ದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪ್ರತಿಭಟನೆ ಸ್ಥಳಕ್ಕೆ ಬಾಬಾಸಾಹೇಬ ಪಾಟೀಲ ಭೇಟಿ ನೀಡಿದರು. ಕಲಗೌಡ ಪಾಟೀಲ, ಶಿವಾನಂದ ಗುಡುಗನಟ್ಟಿ, ಪ್ರವೀಣ ಗಂಗೋಳ, ಎಂ.ಎ್.ಜಕಾತಿ ಇತರರಿದ್ದರು.
Published on
ಚನ್ನಮ್ಮನ ಕಿತ್ತೂರು: ಪಟ್ಟಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೂಲ ಸೌಕರ್ಯ ಕೊರತೆ ಇದ್ದು, ಸರ್ಕಾರದಿಂದ ಬರುವ ಅನುದಾನ ದುರ್ಬಳಕೆ ಆಗುತ್ತಿದೆ ಎಂದು ಆರೋಪಿಸಿ, ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಕೆಲ ಬೋಧಕರು ವಿದ್ಯಾರ್ಥಿನಿಯರಿಗೆ ಅವಾಚ್ಯ ಶಬ್ದಗಳ ಬಳಕೆ ಮಾಡುತ್ತಿದ್ದಾರೆ. ಹೆಚ್ಚುವರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಪ್ರಾಂಶುಪಾಲರು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದರು. ಪ್ರತಿಭಟನಾ ನಡೆದ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಬಾಬಾಸಾಹೇಬ ಪಾಟೀಲ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ, ಶೀಘ್ರ ಸಿಡಿಪಿ ಸಭೆ ಕರೆದು ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ತಹಸೀಲ್ದಾರ್ ಕಲಗೌಡ ಪಾಟೀಲ, ಸಿಪಿಐ ಶಿವಾನಂದ ಗುಡುಗನಟ್ಟಿ, ಪಿಎಸ್‌ಐ ಪ್ರವೀಣ ಗಂಗೋಳ, ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎ್.ಜಕಾತಿ, ಮಂಜುನಾಥ ದೊಡ್ಡಣ್ಣನವರ, ಅಷ್ಪಾಕ್ ಹವಾಲ್ದಾರ್, ಸುರೇಶ ಕಿತ್ತೂರ, ಆಕಾಶ ದಡ್ಡಿ, ರೆಹಮತ್‌ಉಲ್ಲಾ ಹೊನ್ನಾಪುರ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net