ಈ ಬಾರಿ ಮುಂಗಾರಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವ ಹಿನ್ನೆಲೆ ಕೆರೆ ಕಟ್ಟೆಗಳು ನೀರಿಲ್ಲದೆ ಬತ್ತುತ್ತಿವೆ. ಅಂತರ್ಜಲ ಮಟ್ಟ ತೀವ್ರ ಕುಸಿತದಿಂದಾಗಿ ಕೊಳವೆ ಬಾವಿಗಳು ಬಂದ್ ಆಗುತ್ತಿವೆ. ಇದರಿಂದಾಗಿ ಗ್ರಾಮಗಳಲ್ಲಿ ಜನ ಜಾನುವಾರಗಳಿಗೆ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿದೆ.ಈ ಸಮಸ್ಯೆ ಪರಿಹರಿಸಲು ಕೂಡಲೇ ಮಲಪ್ರಭಾ ಬಲದಂಡೆ ಕಾಲುವೆಗೆ ನೀಡುವ ಬಿಡುಗಡೆ ಮಾಡುವಂತೆ ರೈತರು ವಿನಂತಿಸಿದರು.