ಕುಡಚಿ: ಕುಡಚಿ-ಬಾಗಲಕೋಟೆ ರೈಲು ಮಾರ್ಗದ ಕಾಮಗಾರಿ ಆರಂಭ ಹಾಗೂ ಕುಡಚಿ ನಿಲ್ದಾಣದಲ್ಲಿ ಮೂಲ ಸೌಕರ್ಯ ಒದಗಿಸಬೇಕೆಂದು ಆಗ್ರಹಿಸಿ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಕುತುಬುದ್ದೀನ್ ಖಾಜಿ ನೇತೃತ್ವದಲ್ಲಿ ಗುರುವಾರ ಆರಂಭವಾದ ಪ್ರತಿಭಟನೆಗೆ ನಿಡಸೋಸಿಯ ಡಾ.ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಚಾಲನೆ ನೀಡಿದರು.
ಕುಡಚಿ ರೈಲು ನಿಲ್ದಾಣವನ್ನು ಅಮೃತ ಭಾರತ ಯೋಜನೆಯಡಿ ಅಭಿವೃದ್ಧಿಪಡಿಸಬೇಕು. ಆವರಣದಲ್ಲಿ ಪೊಲೀಸ್ ಠಾಣೆ ಆರಂಭಿಸಬೇಕು, ಎಲ್ಲ ಎಕ್ಸ್ಪ್ರೆಸ್ ರೈಲುಗಳಿಗೆ ಕುಡಚಿ ನಿಲ್ದಾಣದಲ್ಲಿ ನಿಲುಗಡೆ ನೀಡಬೇಕು, ಮೂಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಹೋರಾಟಗಾರು ಆಗ್ರಹಿಸಿದರು.