ಬೆಳಗಾವಿ: ರಾಜ್ಯದ ವಿವಿಧ ಸರ್ಕಾರಿ, ಅನುದಾನಿತ ಕಾಲೇಜುಗಳಲ್ಲಿ ನಕಲಿ ಪಿಎಚ್.ಡಿ ಪದವಿ ಹೊಂದಿರುವವರು ಅತಿಥಿ ಹಾಗೂ ಪೂರ್ಣ ಪ್ರಮಾಣದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರದಲ್ಲಿ ಗುರುವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಪ್ರತಿಭಟನೆ ನಡೆಸಲಾಯಿತು.