ಉತ್ತಮ ಜೀವನ ಶೈಲಿಯಿಂದ ಮಧುಮೇಹ ನಿಯಂತ್ರಣ

ಬೆಳಗಾವಿ ನಗರದ ಯಳ್ಳೂರ ರಸ್ತೆಯ ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಮಧುಮೇಹ ಉಚಿತ ತಪಾಸಣೆ ಶಿಬಿರದಲ್ಲಿ ಪ್ರಶಾಂತ ದೇಸಾಯಿ, ಡಾ.ಶ್ರೀನಿವಾಸ ಬಿ., ಡಾ. ವೀರೇಂದ್ರ ಅಷ್ಟಗಿ, ಡಾ.ಆರ್.ಜಿ.ನೆಲವಿಗೆ ಇತರರಿದ್ದರು.

Published on
ಬೆಳಗಾವಿ: ಮಧುಮೇಹ ಜಾಗತಿಕ ಆರೋಗ್ಯ ಸಮಸ್ಯೆಯಾಗಿ ಬೆಳೆದಿದೆ. ಮಧುಮೇಹ ಪತ್ತೆಯಾದ ನಂತರ ಅಗತ್ಯ ಔಷಧ ಮತ್ತು ಉತ್ತಮ ಜೀವನ ಶೈಲಿಯಿಂದ ಅದನ್ನು ನಿಯಂತ್ರಿಸಬಹುದು ಎಂದು ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ದೇಸಾಯಿ ಹೇಳಿದರು. ನಗರದ ಯಳ್ಳೂರ ರಸ್ತೆಯ ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ವಿಶ್ವ ಮಧುಮೇಹ ದಿನದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಮಧುಮೇಹ ಉಚಿತ ತಪಾಸಣೆ ಶಿಬಿರದಲ್ಲಿ ಅವರು ಮಾತನಾಡಿದರು. ಶಿಬಿರದಲ್ಲಿ 100ಕ್ಕೂ ಅಧಿಕ ರೋಗಿಗಳನ್ನು ಪರೀಕ್ಷಿಸಲಾಯಿತು. ಔಷಧ ವಿಭಾಗದ ಮುಖ್ಯಸ್ಥ ಡಾ.ಶ್ರೀನಿವಾಸ ಬಿ., ಹಿರಿಯ ತಜ್ಞವೈದ್ಯರಾದ ಡಾ.ವಾಳ್ವೇಕರ, ಡಾ.ವೀರೇಂದ್ರ ಅಷ್ಟಗಿ, ಆಸ್ಪತ್ರೆ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಆರ್.ಜಿ.ನೆಲವಿಗೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net