ಉಳ್ಳಾಗಡ್ಡಿ-ಖಾನಾಪುರ: ಯಮಕನಮರಡಿ ಕ್ಷೇತ್ರದಲ್ಲಿ ಬಹುತೇಕ ರಸ್ತೆ ಉತ್ತಮವಾಗಿವೆ. ಇನ್ನೆರಡು ವರ್ಷಗಳಲ್ಲಿ ಖಾನಾಪುರ, ರಾಯಬಾಗ, ನಿಪ್ಪಾಣಿ ಸೇರಿದಂತೆ ವಿವಿಧ ಕ್ಷೇತ್ರಗಳ ರಸ್ತೆ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಯಮಕನಮರಡಿಯ ಡಿಜಿಟಲ್ ಗ್ರಂಥಾಲಯಕ್ಕೆ ಈಚೆಗೆ ಭೇಟಿ ನೀಡಿ ಮಾತನಾಡಿ, ಮುಂಬರುವ ದಿನಗಳಲ್ಲಿ ಮಳೆಯಾದರೆ ಬೆಳೆ ಹಾಗೂ ಕುಡಿಯುವ ನೀರಿನ ಅಭಾವ ನೀಗಲಿದೆ. ಮಳೆಯಿಲ್ಲದೆ ಎಲ್ಲೆಡೆ ಸಮಸ್ಯೆಯಾಗಿದೆ. ಯಮಕನಮರಡಿ ಗ್ರಾಪಂ ಸಭಾಭವನದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ನಂತರ ಡಿಜಿಟಲ್ ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಿರಣಸಿಂಗ್ ರಜಪೂತ, ಈರಣ್ಣ ಬಿಸಿರೊಟ್ಟಿ, ರವೀಂದ್ರ ಜಿಂಡ್ರಾಳಿ, ಆನಂದ ಚನ್ನಪ್ಪಗೋಳ, ದಸ್ತಗೀರ್ ಬಸ್ಸಾಪುರಿ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಎಚ್.ಎಸ್.ಕರೆಹೊನ್ನ ಇತರರಿದ್ದರು.