ಉದ್ಯೋಗ ಮೇಳದಲ್ಲಿ ಬೆಳಗಾವಿ, ಹುಬ್ಬಳ್ಳಿ, ಬೆಂಗಳೂರು ನಗರಗಳಿಂದ 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿವೆ. ಎಸ್.ಎಸ್.ಎಲ್.ಸಿ., ಪಿಯಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ, ಸ್ನಾತಕೋತ್ತರ ಪದವಿ ಹಾಗೂ ಇನ್ನಿತರ ಶಿಕ್ಷಣ ಪೂರೈಸಿರುವ ಜಿಲ್ಲೆಯ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಉದ್ಯೋಗಗಳನ್ನು ಪಡೆದುಕೊಳ್ಳಬೇಕು ಹಾಗೂ ಉದ್ಯೋಗ ಮೇಳವನ್ನು ಯಶಸ್ವಿಗೊಳಿಸಬೇಕು ಎಂದು ರಾಹುಲ್ ಶಿಂಧೆ ತಿಳಿಸಿದ್ದಾರೆ.