ಜಿಲ್ಲಾಮಟ್ಟದ ಮಾವು ಮೇಳಕ್ಕೆ ಚಾಲನೆ

 ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿರುವ ತೋಟಗಾರಿಕಾ ಇಲಾಖೆಯ ಆವರಣದಲ್ಲಿ ಶುಕ್ರವಾರ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ರಾಹುಲ ಶಿಂಧೆ, ಚೇತನಸಿಂಗ್ ರಾಠೋಡ್  ಚಾಲನೆ ನೀಡಿದರು. ವಿನಯ ನಾವಲಗಟ್ಟಿ, ಭೂಷಣ ಬೋರಸೆ ಇತರರಿದ್ದರು.
ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿರುವ ತೋಟಗಾರಿಕಾ ಇಲಾಖೆಯ ಆವರಣದಲ್ಲಿ ಶುಕ್ರವಾರ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ರಾಹುಲ ಶಿಂಧೆ, ಚೇತನಸಿಂಗ್ ರಾಠೋಡ್ ಚಾಲನೆ ನೀಡಿದರು. ವಿನಯ ನಾವಲಗಟ್ಟಿ, ಭೂಷಣ ಬೋರಸೆ ಇತರರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಸ್ಮಾರ್ಟ್ ಸಿಟಿಯಲ್ಲಿ ಆರಂಭಗೊಂಡಿರುವ ಜಿಲ್ಲಾ ಮಟ್ಟದ ಮಾವು ಮೇಳಕ್ಕೆ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಾಜ್ಯದ ವಿವಿಧ ಜಿಲ್ಲೆ, ಮಹಾರಾಷ್ಟ್ರ, ಗೋವಾ ರಾಜ್ಯದ ವಿವಿಧ ಭಾಗಗಳಿಂದ 45 ತಳಿಯ ಮಾವು ಬಂದಿದೆ.
ನಗರದ ಕ್ಲಬ್ ರಸ್ತೆಯಲ್ಲಿರುವ ತೋಟಗಾರಿಕಾ ಇಲಾಖೆಯ ಆವರಣದಲ್ಲಿ ಜಿಲ್ಲಾ ಪಂಚಾಯತ ಹಾಗೂ ತೋಟಗಾರಿಕಾ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿರುವ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶುಕ್ರವಾರ ಜಿಪಂ ಸಿಇಒ ರಾಹುಲ ಶಿಂಧೆ, ಬೆಳಗಾವಿ ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಚೇತನಸಿಂಗ್ ರಾಠೋಡ್ ಚಾಲನೆ ನೀಡಿದರು.
ಬಳಿಕ ಜಿಪಂ ಸಿಇಒ ರಾಹುಲ ಶಿಂಧೆ ಮಾತನಾಡಿ, ಜಿಲ್ಲೆಯ ವಿವಿಧ ತಾಲೂಕು ಹಾಗೂ ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳ ರೈತರು ತಮ್ಮ ಮಾವುಗಳನ್ನು ಮಾರಾಟಕ್ಕೆ ಇರಿಸಿದ್ದಾರೆ. ಜತೆಗೆ ಮಹಾರಾಷ್ಟ್ರದ ದೇವಗಡ, ಪಂಡರಪುರನಿಂದ ಕೂಡ ರೈತರು ತಮ್ಮ ಮಾವಿನ ಹಣ್ಣುಗಳನ್ನು ಮಾರಾಟ ಮಾಡಲು ಆಗಮಿಸಿದ್ದಾರೆ. ಅಲ್ಫಾನ್ಸೋ, ಕೇಸಸ್, ಗೋವಾ ಮಂಕೂರ, ಮಲ್ಲಿಕಾ, ಬಿಟ್ಕಿ ಸೇರಿ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಮಾರಾಟಕ್ಕೆ ಇರಿಸಲಾಗಿದೆ. ಮೇ 8 ರಿಂದ 10 ರವರೆಗೆ ಮೂರು ದಿನಗಳ ಕಾಲ ಮೇಳ ಜರುಗಲಿದ್ದು, ಸಾರ್ವಜನಿಕರು ನೇರವಾಗಿ ಮಾವುಗಳನ್ನು ಖರೀದಿಸುವ ಮೂಲಕ ಮೇಳದ ಸದುಪಯೋಗ ಪಡೆಯಬೇಕು ಎಂದರು.
ಬೆಳಗಾವಿ ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಚೇತನಸಿಂಗ್ ರಾಠೋಡ್ ಮಾತನಾಡಿ, , ರೈತರಿಂದ ನೇರವಾಗಿ ಗ್ರಾಹಕರಿಗೆ ಗುಣಮಟ್ಟದ ಮಾವಿನ ಹಣ್ಣುಗಳನ್ನು ಯೋಗ್ಯ ದರದಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಮಾವು ಮೇಳವನ್ನು ಆಯೋಜಿಸಲಾಗಿದೆ. ಬೆಳಗಾವಿ ನಗರ ಹಾಗೂ ಜಿಲ್ಲೆಯ ಸಾರ್ವಜನಿಕರು ಮೇಳದಲ್ಲಿ ಭಾಗವಹಿಸಿ, ಮಾವುಗಳನ್ನು ಖರೀದಿಸುವ ಮೂಲಕ ಮೇಳದ ಯಶಸ್ಸಿಗೆ ಕೈಜೋಡಿಸಬೇಕು ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಬೆಳಗಾವಿ ನಗರ ಪೊಲೀಸ ಆಯುಕ್ತ ಭೂಷಣ ಬೋರಸೆ ಇತರರಿದ್ದರು.
..............
ಬಾಕ್ಸ್
ರೈತರು ಸಾವಯವ ಕೃಷಿ ಕೈಗೊಂಡು ಬೆಳೆದ ಮಾವುಗಳನ್ನು ವಿಶೇಷವಾಗಿ ತೋಟಗಾರಿಕಾ ಇಲಾಖೆಯಿಂದ ಗುರುತಿಸಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಮಧ್ಯವರ್ತಿಗಳ ಹಾವಳಿ ಇಲ್ಲದೇ ರೈತರು ಮಾರಾಟ ಮಾಡಲು ಅನುಕೂಲವಾಗುತ್ತದೆ. ಜತೆಗೆ ಸಾರ್ವಜನಿಕರು ಕೂಡ ಗುಣಮಟ್ಟದ ಮಾವುಗಳನ್ನು ರೈತರಿಂದ ನೇರವಾಗಿ ಕಡಿಮೆ ದರದಲ್ಲಿ (ಡಜನ್ ಗೆ ರೂ. 400 ರಿಂದ ರೂ.700 ರವರೆಗೆ) ಖರೀದಿಸಬಹುದಾಗಿದೆ ಎಂದು ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಮಹಾಂತೇಶ ಮುರಗೋಡ ತಿಳಿಸಿದ್ದಾರೆ.
.................
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net