ಕುಡಿಯುವ ನೀರು ಅನ್ಯ ಉದ್ದೇಶಕ್ಕೆ ಬಳಕೆ ಬೇಡ

ಹುಕ್ಕೇರಿ ತಾಲೂಕಿನ ಹರಗಾಪೂರ ಹಾಗೂ ಪಾಶ್ಚಾಪೂರ ಗ್ರಾಮಗಳಿಗೆ ಗುರುವಾರ ಸಿಇಒ ರಾಹುಲ ಶಿಂಧೆ, ಎಸ್‌ಪಿ ಕೆ.ರಾಮರಾಜನ್ ಭೇಟಿ ನೀಡಿದರು. ಗಂಗಾಧರ ದಿವಟರ್, ಟಿ.ಆರ್.ಮಲ್ಲಾಡದ ಇತರರಿದ್ದರು.
ಹುಕ್ಕೇರಿ ತಾಲೂಕಿನ ಹರಗಾಪೂರ ಹಾಗೂ ಪಾಶ್ಚಾಪೂರ ಗ್ರಾಮಗಳಿಗೆ ಗುರುವಾರ ಸಿಇಒ ರಾಹುಲ ಶಿಂಧೆ, ಎಸ್‌ಪಿ ಕೆ.ರಾಮರಾಜನ್ ಭೇಟಿ ನೀಡಿದರು. ಗಂಗಾಧರ ದಿವಟರ್, ಟಿ.ಆರ್.ಮಲ್ಲಾಡದ ಇತರರಿದ್ದರು.
Published on
ಬೆಳಗಾವಿ: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸದಂತೆ, ಕುಡಿಯುವ ನೀರು ಅನ್ಯ ಉದ್ದೇಶಕ್ಕೆ ಬಳಕೆಗೆ ಕಡಿವಾಣ ಹಾಕಬೇಕು ಎಂದು ಅಧಿಕಾರಿಗಳಿಗೆ ಜಿಪಂ ಸಿಇಒ ರಾಹುಲ ಶಿಂಧೆ ಸೂಚಿಸಿದರು.
ಹುಕ್ಕೇರಿ ತಾಲೂಕಿನ ಹರಗಾಪೂರ ಹಾಗೂ ಪಾಶ್ಚಾಪೂರ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೂರೈಕೆ ಕುರಿತು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಬೇಸಿಗೆ ಕಾಲದಲ್ಲಿ ಕುಡಿಯುವ ನೀರು ಮಿತವಾಗಿ ಬಳಕೆ ಮಾಡಲು ಜನರಲ್ಲಿ ನಿರಂತರ ಜಾಗೃತಿ ಮೂಡಿಸಬೇಕು. ಬೇಕಾಬಿಟ್ಟಿಯಾಗಿ ಕುಡಿಯುವ ನೀರು ಬಳಕೆ, ನಲ್ಲಿ ನೀರು ಚರಂಡಿಗೆ ಬಿಡುವವರು, ವಾಹನ ಸ್ವಚ್ಛತೆ ಬಳಕೆ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಹಳ್ಳಿಗಳಲ್ಲಿ ಜನರಿಗೆ ಶುದ್ದ ಕುಡಿಯುವ ನೀರು ಪೂರೈಕೆ ಮಾಡುವ ಘಟಕಗಳು, ಟ್ಯಾಂಕ್‌ಗಳನ್ನು ಮೇಲಿಂದ ಮೇಲೆ ಸ್ವಚ್ಛಗೊಳಿಸಬೇಕು. ನೀರಿನ ಮೂಲಗಳಾದ ಕೊಳವೆ, ತೆರೆದ ಬಾವಿ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ನದಿಗಳಿಂದ ನೀರು ಪೂರೈಕೆಯಾಗುವ ಜನವಸತಿ ಪ್ರದೇಶಗಳಲ್ಲಿ ಬೇಡಿಕೆಗೆ ಅನುಗುಣವಾಗಿ ನೀರು ಸರಬರಾಜು ಮಾಡಿ. ಈಕುರಿತು ಜನರಿಗೆ ತಿಳುವಳಿಗೆ ನೀಡುವ ಕೆಲಸವನ್ನು ಗ್ರಾಪಂ ಅಧಿಕಾರಿ, ಸಿಬ್ಬಂದಿ ಮಾಡಬೇಕು.ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆಗೆ ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಂತರ ಅರಬಾವಿಗೆ ಭೇಟಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿಪಂ ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ್, ತಾಪಂ ಇಒ ಟಿ.ಆರ್. ಮಲ್ಲಾಡದ, ತಹಶೀಲ್ದಾರ್ ಬಲರಾಮ ಕಟ್ಟಿಮನಿ, ಸಂಕೇಶ್ವರ ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಮಠದ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net