ಬೆಂಗಳೂರಿನಲ್ಲಿ ಕೆಎಲ್‌ಇ ಸಂಸ್ಥೆಯ ಕಾಹೆರ ಕುಲಾಧಿಪತಿ ಡಾ.ಪ್ರಭಾಕರ ಕೋರೆ ಗುರುವಾರ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ನಿಖಿಲ್ ಕುಮಾರಸ್ವಾಮಿ ಇದ್ದರು.
ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಕಾಹೆರ ಕುಲಾಧಿಪತಿ ಹಾಗೂ ಪದ್ಮಶ್ರೀ ಪುರಸ್ಕೃತ ಡಾ.ಪ್ರಭಾಕರ ಕೋರೆ ಗುರುವಾರ ಮಾಜಿ ಪ್ರಧಾನಮಂತ್ರಿ
ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ, ಇತ್ತೀಚೆಗೆ ನಿಧನರಾದ ಚೆನ್ನಮ್ಮ ದೇವೇಗೌಡ ಅವರ ಅಗಲಿಕೆಗೆ ಸಂತಾಪ ಸೂಚಿಸಿದರು.
ಚೆನ್ನಮ್ಮ ನಿಧನದಿಂದ ದೇವೇಗೌಡರ ಕುಟುಂಬಕ್ಕೆ ಮಾತ್ರವಲ್ಲದೆ, ಸಾರ್ವಜನಿಕರ ಬದುಕಿಗೆ ಅಪಾರ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ದೇವೇಗೌಡರು ಮತ್ತು ಅವರ ಕುಟುಂಬದ ಸದಸ್ಯರಿಗೆ ಕರುಣಿಸಲಿ ಎಂದು ಪ್ರಾರ್ಥಿಸಿದರು. ನಂತರ ಎಚ್.ಡಿ.ದೇವೇಗೌಡರ ಆರೋಗ್ಯ ವಿಚಾರಿಸಿ ಅವರೊಂದಿಗೆ ಕೆಲಕಾಲ ಆತ್ಮೀಯ ಮಾತುಕತೆ ನಡೆಸಿದರು. ಜೆಡಿಎಸ್ ಯುವ ಮುಖಂಡ ಹಾಗೂ ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಇದ್ದರು.