ಮಹಾದಾಸೋಹಿ ಶಿವಶಂಕರಪ್ಪ

ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ
Published on
ಬೆಳಗಾವಿ: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡಿದ ಶಿಕ್ಷಣಪ್ರೇಮಿ, ಅಖಿಲಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮಹಾದಾಸೋಹಿ ಆಗಿದ್ದರು ಎಂದು ತೋಂಟದಾರ್ಯ ಸಂಸ್ಥಾನಮಠದ ಡಾ.ತೋಂಟದ ಸಿದ್ಧರಾಮ ಶ್ರೀ ಕಂಬನಿ ಮಿಡಿದಿದ್ದಾರೆ.
ಪ್ರತಿಭೆ ಮತ್ತು ಪರಿಶ್ರಮಗಳ ಕೂಡಲಸಂಗಮದಂತಿದ್ದ ಅವರು, ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರಾದ ನಂತರ ಧರ್ಮದ ಏಳಿಗೆ ಮತ್ತು ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ನಿರಂತರ ಶ್ರಮಿಸುತ್ತಿದ್ದರು ಎಂದು ಶ್ರೀಗಳು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net