ಸಾವಯವ ಗೊಬ್ಬರ ಬಳಕೆಗೆ ಒತ್ತು ನೀಡಿ

ಸಾವಯವ ಗೊಬ್ಬರ
ಸಾವಯವ ಗೊಬ್ಬರ
Published on

ಬೆಳಗಾವಿ: ರಾಸಾಯನಿಕ ಗೊಬ್ಬರದ ಅತಿಯಾದ ಬಳಕೆಯಿಂದ ಮಣ್ಣಿನ ಲವತ್ತತೆ ಹಾಳಾಗುತ್ತಿದೆ. ಮಣ್ಣಿನ ಸಂರಕ್ಷಣೆ ಹಾಗೂ ಇಳುವರಿ ಹೆಚ್ಚಿಸಲು ರೈತರು ಸಾವಯವ ಗೊಬ್ಬರ ಬಳಕೆಗೆ ಒತ್ತು ನೀಡಬೇಕು ಎಂದು ಕಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ

ಎಸ್.ಎಂ.ವಾರದ ಸಲಹೆ ನೀಡಿದರು.

ಸವದತ್ತಿ ತಾಲೂಕಿನ ಇಟ್ನಾಳ ಗ್ರಾಮದಲ್ಲಿ ಅರಬಾವಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಮಣ್ಣಿನ ಆರೋಗ್ಯ ನಿರ್ವಹಣೆ ಕುರಿತು ಈಚೆಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಾವಯವ ಗೊಬ್ಬರಗಳನ್ನು ಸಮರ್ಪಕವಾಗಿ ಸೇರಿಸದೆ ರಾಸಾಯನಿಕ ಗೊಬ್ಬರಗಳ ನಿರಂತರ ಮತ್ತು ವಿವೇಚನಾರಹಿತ ಬಳಕೆಯು ಮಣ್ಣಿನ ಭೌತಿಕ, ರಾಸಾಯನಿಕ ಮತ್ತು ಜೈವಿಕ ಗುಣಲಕ್ಷಣಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಇದರಿಂದಾಗಿ ಮಣ್ಣಿನ ಫಲವತ್ತತೆ ಮತ್ತು ಉತ್ಪಾದಕತೆ ಕಡಿಮೆಯಾಗುತ್ತದೆ ಎಂದು ತಿಳಿಸಿದರು.
ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ ಕಿತ್ತೂರ, ನಿಂಗಪ್ಪ ಹಾದಿಮನಿ, ವೀರಯ್ಯ ಹಿರೇಮಠ,
ಬಸಪ್ಪ ಚಂದರಗಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net