ಬೆಳಗಾವಿ:ಪ್ರಾಥಮಿಕ ಶಾಲಾ ಕಲಿಕಾ ಹಂತದಿಂದಲೇ ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಜತೆಗೆ ಕ್ರೀಡೆ, ಸಾಂಸ್ಕೃತಿ,ಸಂಗೀತ ಚಟುವಟಿಕೆಗಳಲ್ಲಿ ಭಾಗವಹಿಸುವ ಮನೋಪ್ರವೃತ್ತಿ ಬೆಳಸಿಕೊಳ್ಳಬೇಕು ಎಂದು ಮಹಾನಗರ ಪಾಲಿಕೆ ಉಪ ಮಹಾಪೌರ ಹನುಮಂತ ಕೊಂಗಾಲಿ ಹೇಳಿದರು.
ರಾಮತೀರ್ಥ ನಗರದಲ್ಲಿ ಗುರುವಾರ ಆಯೋಜಿಸಿದ್ದ ಚಿತ್ರಕಲೆ, ರಂಗೋಲಿ, ಪ್ರಬಂಧ, ಭಾಷಣ, ಹಾಗೂ ಗಾಯನ ಸ್ಪರ್ಧೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಲ್ಲಿರುವ ಕಲಾ ಪ್ರಕಾರಗಳನ್ನು ಪ್ರೋತ್ಸಾಹಿಸಿ ವೇದಿಕೆ ಕಲ್ಪಿಸುವ ಕೆಲಸ ಆಗಬೇಕು. ಮಕ್ಕಳ ಬೆಳವಣಿಗೆಗೆ ಪೂರಕವಾಗಿ ಶಿಕ್ಷಣ ಇಲಾಖೆ ಹಾಗೂ ಸಂಘ ಸಂಸ್ಥೆಗಳು ಸ್ಪರ್ಧೆಗಳ ಮೂಲಕ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದರು.
ಇದೇ ಸಂದರ್ಭದಲ್ಲಿ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು. 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಲಯನ್ಸ್ ಕ್ಲಬ್ ಅಧ್ಯಕ್ಷ ದಿನೇಶ ಭಿರಡೆ, ಎಂ.ಬಿ. ಪಾಟೀಲ, ಡಾ. ಜಗದೀಶ ಕಾಡಮ್ಮನವರ, ಡಾ. ಮಹೇಶ ಮಗದುಮ್, ಬಸವರಾಜ ಹಮ್ಮಣ್ಣವರ,ಪ್ರೊ. ಶಶಿಕಲಾ ಪಾವಸೆ, ಕಸಾಪ ಮಾಜಿ ತಾಲೂಕು ಅಧ್ಯಕ್ಷ ಬಸವರಾಜ ಕುಪ್ಪಸ ಗೌಡ್ರ, ಶಿಕ್ಷಕಿ ರೇಖಾ ನಾಯ್ಕ ಇತರರಿದ್ದರು.