ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಆಗದಂತೆ ಕ್ರವ ವಹಿಸಿ

ಬೆಳಗಾವಿ ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಹುಲ ಶಿಂಧೆ ಮಾತನಾಡಿದರು. ಡಾ. ಐ.ಪಿ ಗಡಾದ,  ಡಾ.ಎಸ್.ಎಸ್.ಗಡೇದ ಇತರರಿದ್ದರು.
ಬೆಳಗಾವಿ ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಹುಲ ಶಿಂಧೆ ಮಾತನಾಡಿದರು. ಡಾ. ಐ.ಪಿ ಗಡಾದ, ಡಾ.ಎಸ್.ಎಸ್.ಗಡೇದ ಇತರರಿದ್ದರು.
Published on
ಬೆಳಗಾವಿ:ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಉದ್ಬವಿಸದಂತೆ ಮುನ್ನೆಚ್ಚರಿಕೆ ಕ್ರಮದ ಜತೆಗೆ ಖರೀದಿಸಿದ ಔಷಧಿಗಳನ್ನು ಇ-ಪೋರ್ಟಲ್ ಮೂಲಕ ಸರಿಯಾಗಿ ದಾಖಲಿಸಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಸೂಚಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ದಡಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಜಿಲ್ಲಾ ಮತ್ತು ತಾಲೂಕು ಮಟ್ಟದ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಎ.ಬಿ.ಎ.ಆರ್.ಕೆ (ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ) ಕಾರ್ಯಕ್ರಮದಡಿ ಎಲ್ಲ ಸಂಸ್ಥೆಗಳಲ್ಲಿ ಅನುದಾನ ಲಭ್ಯವಿದ್ದು, ಸಮರ್ಪಕವಾಗಿ ಬಳಕೆಯಾಗಬೇಕು ಎಂದರು.
ಪ್ರಸ್ತುತ ರಾಷ್ಟ್ರೀಯ ಕ್ಷಯ ರೋಗ ನಿಯಂತ್ರಣ ಕಾರ್ಯಕ್ರಮದಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೋರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು 3 ದಿನಗಳ ಒಳಗಾಗಿ ಪತ್ರಿಕೆಯಲ್ಲಿ ಪ್ರಕಟಣೆ ಹೊರಡಿಸಬೇಕು. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕ್ರಮ ವಹಿಸಬೇಕು ಯಾವುದೇ ಕಾರಣಕ್ಕೂ ನಿರ್ಲಕ್ಷೃ ಮಾಡಬಾರದು. ವಿಶೇಷ ಜಯಂತಿಗಳಂದು ಆರೋಗ್ಯ ಇಲಾಖೆಯಿಂದ ರಕ್ತದಾನ ಶಿಬಿರ ಆಯೋಜಿಸಬೇಕು ಎಂದು ತಿಳಿಸಿದರು.
ಆರೋಗ್ಯ ಆಧಿಕಾರಿ ಮಾತನಾಡಿ, ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದಡಿಯಲ್ಲಿ ರಾಮದುರ್ಗ, ಸವದತ್ತಿ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿ ಕಣ್ಣಿನ ಪೋರೆ ಶಸ್ತ್ರ ಚಿಕಿತ್ಸೆಯ ಪ್ರಗತಿ ಕಡಿಮೆ ದಾಖಲಾಗಿದ್ದು, ಕಾರಣ ಖಾಸಗಿ ಸಂಘ-ಸಂಸ್ಥೆಗಳಿಗೆ ಕಡಿಮೆ ಗುರಿ ನಿಗಡಿಪಡಿಸಿರುವುದರಿಂದ ಈ ತಾಲೂಕಿನಲ್ಲಿ ಕಣ್ಣಿನ ಪೋರೆ ಶಸ್ತ್ರ ಚಿಕಿತ್ಸೆ ಮಾಡುವ ಆಸ್ಪತ್ರೆಗಳ ಇಲ್ಲದೇ ಇರುವುದರಿಂದ ಕಡಿಮೆ ಪ್ರಗತಿ ದಾಖಲಾತಿ ಆಗಿರುತ್ತದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ, ಚಿಕ್ಕೋಡಿ ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಸ್.ಗಡೇದ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಶ್ರೀಕಾಂತ ಸುಣಧೋಳಿ, ಜಿಲ್ಲಾ ಆಸ್ಪತ್ರೆ ಶಸ್ತ್ರ ಚಿಕಿತ್ಸಕ ಡಾ. ಜಗದೀಶ ಗಾಣಗಿ ಇತರರಿದ್ದರು.
...........
ಬಾಕ್ಸ್
ಕುಡಿಯುವ ನೀರಿನ ಮಾದರಿ ಪರೀಕ್ಷೆ
ಎಲ್ಲ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆರ್. ಬಿಎಸ್‌ಕೆ ತಂಡ(ರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮ) ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಪ್ರತಿ 2 ತಿಂಗಳಿಗೊಮ್ಮೆ ತಮ್ಮ ತಾಲೂಕಿನಲ್ಲಿರುವ ಎಲ್ಲ ವಸತಿ ನಿಲಯಗಳಿಗೆ ಭೇಟಿ ನೀಡಬೇಕು.ಈ ವೇಳೆ ಕುಡಿಯುವ ನೀರಿನ ಮಾದರಿ ಪರೀಕ್ಷೆ ಮತ್ತು ಮಕ್ಕಳ ಮಾನಸಿಕ ಆರೋಗ್ಯ ಕುರಿತು ತಪಾಸಣೆ ಮತ್ತು ಅರಿವು ಮೂಡಿಸಬೇಕು. ವಸತಿ ನೀಲಯಗಳಿಗೆ ಭೇಟಿ ನೀಡಿದ ಬಗ್ಗೆ ಸಂದರ್ಶಕರ ಪುಸ್ತಕ ಮತ್ತು ತಮ್ಮ ದೈನಂದಿನ ದಿನಚರಿ ಪುಸ್ತಕದಲ್ಲಿ ದಾಖಲಿಸಿರುವ ಕುರಿತು ಜಿಲ್ಲಾ ಸಮೀಕ್ಷಣಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು ಎಂದು ಸಿಇಒ ರಾಹುಲ ಶಿಂಧೆ ಸೂಚಿಸಿದರು.
......................
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net