ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ

ತೆಲಸಂಗ ಗ್ರಾಮದಲ್ಲಿ ಸಸಿ ನೆಡುವ ಮೂಲಕ ಸಹಕಾರಿ ಸಪ್ತಾಹ ಕಾರ್ಯಕ್ರಮ ಆಚರಿಸಲಾಯಿತು. ಗೋಪಾಲ ಶೆಲ್ಲೆಪ್ಪಗೋಳ, ಡಾ.ಆರ್.ಡಿ.ಪೂಜಾರಿ ಶ್ರೀಶೈಲ ಶೆಲ್ಲೆಪ್ಪಗೋಳ ಇತರರಿದ್ದರು.
ತೆಲಸಂಗ ಗ್ರಾಮದಲ್ಲಿ ಸಸಿ ನೆಡುವ ಮೂಲಕ ಸಹಕಾರಿ ಸಪ್ತಾಹ ಕಾರ್ಯಕ್ರಮ ಆಚರಿಸಲಾಯಿತು. ಗೋಪಾಲ ಶೆಲ್ಲೆಪ್ಪಗೋಳ, ಡಾ.ಆರ್.ಡಿ.ಪೂಜಾರಿ ಶ್ರೀಶೈಲ ಶೆಲ್ಲೆಪ್ಪಗೋಳ ಇತರರಿದ್ದರು.
Published on
ತೆಲಸಂಗ: ಸಸಿ ನೆಡುವುದಷ್ಟೇ ಅಲ್ಲದೆ, ಅವುಗಳನ್ನು ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಬಸವೇಶ್ವರ ಸಹಕಾರ ಸಂಘದ ಕಾರ್ಯದರ್ಶಿ ಗೋಪಾಲ ಶೆಲ್ಲೆಪ್ಪಗೋಳ ಹೇಳಿದರು.
ಬಸವೇಶ್ವರ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ಹಮ್ಮಿಕೊಂಡಿದ್ದ ಸಹಕಾರ ಸಪ್ತಾಹ ನಿಮಿತ್ತ ಪರಿಸರ ಜಾಗೃತಿ ಅಭಿಯಾನಕ್ಕೆ ಈಚೆಗೆ ಚಾಲನೆ ನೀಡಿ ಮಾತನಾಡಿ, ಮನುಷ್ಯನ ಸ್ವಾರ್ಥದಿಂದಾಗಿ ಪರಿಸರ ವಿನಾಶದ ಅಂಚಿಗೆ ತಲುಪುತ್ತಿದೆ. ಹದಗೆಡುತ್ತಿರುವ ಪರಿಸರವನ್ನು ಯಥಾಸ್ಥಿತಿಗೆ ತರಲು ಮತ್ತು ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯ ನೀಡಲು ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು ಎಂದರು.
ತಾಪಂ ಮಾಜಿ ಸದಸ್ಯ ಶ್ರೀಶೈಲ ಶೆಲ್ಲೆಪ್ಪಗೋಳ, ಡಾ.ಆರ್.ಡಿ.ಪೂಜಾರಿ, ಕಬೀರ ಕೊರಬು, ಸೈಬಣ್ಣ ಶೆಲ್ಲೆಪ್ಪಗೋಳ, ಸಚಿನ ಸಾವಂತ, ಆಸೀಫ್ ಮುಜಾವರ, ಕಾಸಪ್ಪ ಹಳ್ಳದ, ಆನಂದ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net