ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬುಧವಾರ ಗೃಹ ಕಚೇರಿಯಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಜನರು, ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಶಾಸಕಿ ಮುಂದಿಟ್ಟರು. ಭೂಮಿ, ಕಂದಾಯ, ಸಾಮಾಜಿಕ ಭದ್ರತಾ ಯೋಜನೆ, ಕುಡಿಯುವ ನೀರು, ರಸ್ತೆ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಜನರು ಮನವಿ ಸಲ್ಲಿಸಿದರು. ಎಲ್ಲರ ಅಹವಾಲನ್ನು ತಾಳ್ಮೆಯಿಂದ ಆಲಿಸಿ, ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಸೂಚಿಸಿದರು.
"
ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಗೃಹ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಆಲಿಸಿದರು.ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆ ಮತ್ತು ಪ್ರೀತಿಯೇ ನನ್ನ ಶಕ್ತಿ. ಅಧಿಕಾರ ಮತ್ತು ಹುದ್ದೆ ಶಾಶ್ವತವಲ್ಲ. ಜನರೊಂದಿಗೆ ಇರುವ ಸಂಬಂಧ ಶಾಶ್ವತ. ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನನ್ನ ಕರ್ತವ್ಯ. ಹುದ್ದೆ ಇರಲಿ, ಇರದಿರಲಿ, ಸಾರ್ವಜನಿಕ ಸೇವೆ ನಿರಂತರ ಮುಂದುವರಿಯಲಿದೆ.
— ಲಕ್ಷ್ಮೀ ಹೆಬ್ಬಾಳ್ಕರ್ ಶಾಸಕಿ