ಕೆವೈಸಿ ಬಗ್ಗೆ ಪ್ರತಿ ಬ್ಯಾಂಕ್ ಗ್ರಾಹಕ ಅರಿತಿರಬೇಕು

ಮತ್ತಿಕೊಪ್ಪದ ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದಲ್ಲಿ ಗುರುವಾರ ಜರುಗಿದ ಆರ್ಥಿಕ ಸಾಕ್ಷರತಾ ಸಪ್ತಾಹದ ಉದ್ಘಾಟನೆಯಲ್ಲಿ ಪ್ರಶಾಂತ ಘೋಡಕೆ, ಡಾ.ಮಂಜುನಾಥ ಚೌರಡ್ಡಿ, ಕಿರಣ ಶಿಂಧೆ, ಗೀತಾ ಖಾನಪೇಠ  ಇತರರಿದ್ದರು.
ಮತ್ತಿಕೊಪ್ಪದ ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದಲ್ಲಿ ಗುರುವಾರ ಜರುಗಿದ ಆರ್ಥಿಕ ಸಾಕ್ಷರತಾ ಸಪ್ತಾಹದ ಉದ್ಘಾಟನೆಯಲ್ಲಿ ಪ್ರಶಾಂತ ಘೋಡಕೆ, ಡಾ.ಮಂಜುನಾಥ ಚೌರಡ್ಡಿ, ಕಿರಣ ಶಿಂಧೆ, ಗೀತಾ ಖಾನಪೇಠ ಇತರರಿದ್ದರು.
Published on
ಬೆಳಗಾವಿ: ಭಾರತೀಯ ರಿಜರ್ವ್ ಬ್ಯಾಂಕ್ ಪ್ರತಿ ವರ್ಷ ಫೆಬ್ರುವರಿಯಲ್ಲಿ ಗ್ರಾಹಕರಿಗಾಗಿ ಒಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳುತ್ತ ಬಂದಿದೆ. ಈ ವರ್ಷ ಕೆವೈಸಿ ಕುರಿತ ಜಾಗೃತಿ ಕಾರ್ಯಕ್ರಮ ಜಾರಿಗೆ ತಂದಿದ್ದು, ಪ್ರತಿ ಗ್ರಾಮದಲ್ಲೂ ಗ್ರಾಹಕರಿಗೆ ಈ ಕುರಿತು ಮಾಹಿತಿ ನೀಡಲಾಗುತ್ತಿದೆ ಎಂದು ಕೆನರಾ ಲೀಡ್ ಬ್ಯಾಂಕ್ ಡಿಸ್ಟ್ರಿಕ್ಟ್ ಮ್ಯಾನೇಜರ್ ಪ್ರಶಾಂತ ಘೋಡಕೆ ಹೇಳಿದರು.
ಭಾರತೀಯ ರಿಜರ್ವ್ ಬ್ಯಾಂಕ್, ಕೆನರಾ ಲೀಡ್ ಬ್ಯಾಂಕ್ ಹಾಗೂ ಮತ್ತಿಕೊಪ್ಪದ ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದಿಂದ ಗುರುವಾರ ಏರ್ಪಡಿಸಿದ್ದ ಆರ್ಥಿಕ ಸಾಕ್ಷರತಾ ಸಪ್ತಾಹ-2026 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೆವೈಸಿ ಸುರಕ್ಷಿತ ಬ್ಯಾಂಕಿಂಗ್ ನಿಮ್ಮ ಮೊದಲ ಹೆಜ್ಜೆ’ ಎಂಬ ಘೋಷ ವಾಕ್ಯದ ಕುರಿತು ವಿವರಿಸಿದರು.
ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ.ಮಂಜುನಾಥ ಚೌರಡ್ಡಿ ಕಾರ್ಯಕ್ರಮ ಉದ್ಘಾಟಿಸಿ, ಕೆವೈಸಿ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿ, ಬ್ಯಾಂಕ್ ಗ್ರಾಹಕರಿಗಾಗಿ ಕೆವೈಸಿ ಮಾಹಿತಿ ಕುರಿತು ಕಾರ್ಯಕ್ರಮ ಮಾಡುತ್ತಿರುವುದು ಶ್ಲಾಘನೀಯ ಕಾರ್ಯ. ರೈತರಿಗೆ, ಸ್ವ-ಸಹಾಯ ಸಂಘದ ಸದಸ್ಯರಿಗೆ ಬ್ಯಾಂಕ್ ಸಾಕಷ್ಟು ಸೌಲಭ್ಯಗಳನ್ನು ಒದಗಿಸುತ್ತಿದೆ. ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ಎನ್‌ಆರ್‌ಎಲ್‌ಎಂ ಡಿಸ್ಟ್ರಿಕ್ಟ್ ಮ್ಯಾನೇಜರ್ ಕಿರಣ ಶಿಂಧೆ ಮಾತನಾಡಿ, ಈ ಕಾರ್ಯಕ್ರಮ ಪ್ರತಿ ಗ್ರಾಮ ಮಟ್ಟದಲ್ಲಿ ತಲುಪಲು ಕೃಷಿ ಸಖಿ ಹಾಗೂ ಪಶು ಸಖಿ ಪ್ರಮುಖ ಪಾತ್ರವಹಿಸಬೇಕು ಎಂದು ತಿಳಿಸಿದರು.
ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕಿ ಗೀತಾ ಖಾನಪೇಠ ಸ್ವಾಗತಿಸಿದರು. ಕೇಂದ್ರದ ಮಣ್ಣು ವಿಜ್ಞಾನಿ ಹಾಗೂ ಕಾರ್ಯಕ್ರಮದ ಸಂಯೋಜಕ ಎಸ್.ಎಂ.ವಾರದ, ಕೆನರಾ ಬ್ಯಾಂಕ್ ವಲಯ ಕಚೇರಿ ಮ್ಯಾನೇಜರ್ ರಾಜಶೇಖರ ದಂಡಿ ಹಾಗೂ 85 ರೈತ, ರೈತ ಮಹಿಳೆಯರು, ಕೃಷಿ ಸಖಿಯರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net