ಪಟ್ಟಣದ ಶಿವಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾಗವಾಡ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಪಟ್ಟಣ ಪಂಚಾಯಿತಿ, ಶಿವಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನ್ಯಾಯ ನಿಮ್ಮದು, ನೆರವು ನಮ್ಮದು ಎಂಬ ಧ್ಯೇಯದೊಂದಿಗೆ ಅಪರಾಧಗಳಿಂದ ಮಕ್ಕಳ ರಕ್ಷಣೆ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಮಕ್ಕಳ ರಕ್ಷಣೆಯ ಕುರಿತು ವಿವರಿಸಿದರು.