ಹಾರೂಗೇರಿ ಜ್ಞಾನಗಂಗೋತ್ರಿ ಪ್ರಾಥಮಿಕ ಹಾಗೂ ಪದ್ಮಾವತಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿವಲಿಂಗ ಸಿದ್ನಾಳ, ಶ್ರೀಪತಿ ದಟವಾಡ, ಜ್ಞಾನೇಶ್ವರ ಧರ್ಮಟ್ಟಿ, ಬಿ.ಎ.ಜಂಬಿಗಿ ಇತರರಿದ್ದರು.
ಹಾರೂಗೇರಿ: ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸರ್ವತೋಮುಖ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದು ಮಹಾಲಿಂಗಪುರ ಕೆಎಲïಇ ಕಾಲೇಜು ಉಪನ್ಯಾಸಕ ಶಿವಲಿಂಗ ಸಿದ್ನಾಳ ಹೇಳಿದರು.
ಪಟ್ಟಣದ ಚಂದ್ರಮಶ್ರೀ ಟ್ರಸ್ಟ್ ವಿಶ್ವಸ್ಥ ಸಂಸ್ಥೆಯ ಜ್ಞಾನನಗಂಗೋತ್ರಿ ಪ್ರಾಥಮಿಕ ಶಾಲೆ ಹಾಗೂ ಪದ್ಮಾವತಿ ಪ್ರೌಢಶಾಲೆ ಸಭಾಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಶ್ರೀಪತಿ ದಟವಾಡ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಗೆ ಶಾಲೆ ಸೂಕ್ತ ವೇದಿಕೆ ಕಲ್ಪಿಸುತ್ತಿದೆ. ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದರು.