ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ವರ್ಷಾನುಪೂರ್ತಿ ಎಲ್ಲ ವಿಷಯಗಳನ್ನು ತರಗತಿಗಳಲ್ಲಿ ಕಲಿತು, ಸಾಕಷ್ಟು ಅಧ್ಯಯನ ಮಾಡಿ ಪರೀಕ್ಷೆ ಬರೆಯಲು ಸಿದ್ಧರಾಗಿದ್ದೀರಿ. ಹೀಗಾಗಿ, ಯಾವುದೇ ಭಯ ಹಾಗೂ ಒತ್ತಡಕ್ಕೆ ಒಳಗಾಗದೇ ಧೈರ್ಯವಾಗಿ ಪರೀಕ್ಷೆ ಎದುರಿಸಿ. ಶಾಂತ ರೀತಿಯಿಂದ ಪ್ರಶ್ನೆಪತ್ರಿಕೆಯನ್ನು ಓದಿ, ಅರ್ಥೈಸಿಕೊಂಡು ಪ್ರಶ್ನೆಗಳಿಗೆ ಉತ್ತರ ಬರೆಯಿರಿ. ನಿಗದಿತ ಅವಧಿಯೊಳಗೆ ಎಲ್ಲ ಪ್ರಶ್ನೆಗಳಿಗೂ ಉತ್ತರಿಸಿ ಎಂದು ಸಲಹೆ ನೀಡಿದ್ದಾರೆ.