ರೈತರ ಸಾಲ ಸಂಪೂರ್ಣ ಮನ್ನಾ ಮಾಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರ ಕಷಿ ಸಂರಕ್ಷಣಾ ಸಮಿತಿ ವತಿಯಿಂದ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಮನವಿ ಸಲ್ಲಿಸಲಾಯಿತು. ಹನುಂತರಾಯ ನಾಯಕ, ಖಾಜಪಾಷಾ ಬನ್ನಿಗನೂರ, ಮಲ್ಲನಗೌಡ ಯಾದಗಿರಿ ಇತರರಿದ್ದರು.
ಬೆಳಗಾವಿ: ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರ ಕೃಷಿ ಸಂರಕ್ಷಣಾ ಸಮಿತಿ ವತಿಯಿಂದ ಪ್ರತಿಭಟಿಸಲಾಯಿತು. ಪ್ರತಿ ಟನ್ ಕಬ್ಬಿಗೆ ಕನಿಷ್ಠ 5,500 ರೂ. ಬೆಂಬಲ ಬೆಲೆ ನಿಗದಿಪಡಿಸಬೇಕು. ಬಗರ್‌ಹುಕುಂ ಸಾಗುವಳಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ನಿಯಂತ್ರಿಸಬೇಕು.
ಸ್ವಾಮಿನಾಥನ್ ಆಯೋಗದ ವರದಿ ಜಾರಿಗೊಳಿಸಬೇಕು. ನೈಜವಾಗಿ ಉಳುಮೆ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಬೇಕು ಎಂದು ಆಗ್ರಹಿಸಿದರು. ಹನುಮಂತರಾಯ ನಾಯಕ, ಖಾಜಾಪಾಷಾ ಬನ್ನಿಗನೂರ, ಮಲ್ಲನಗೌಡ ಯಾದಗಿರಿ ಇತರರಿದ್ದರು.