

ತಂತ್ರಜ್ಞಾನ ಯುಗದಲ್ಲಿ ಕೃಷಿ ಚಟುವಟಿಕೆಗಳಿಗೆ ಕೂಲಿ ಕಾರ್ಮಿಕರ ಸಮಸ್ಯೆ ಎದುರಾಗಿದ್ದರಿಂದ ವಿವಿಧ ಯಂತ್ರೋಪಕರಣ ಬಂದಿದ್ದು, ಅವುಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ನೀಡಬೇಕು. ರೈತ ಸಮುದಾಯದ ಅಭಿವೃದ್ಧಿಗೆ
ಸರ್ಕಾರ ಅನೇಕ ಯೋಜನೆ ರೂಪಿಸಿದ್ದು, ಅಂತಹ ಯೋಜನೆ ಸದ್ಬಳಕೆ ಮಾಡಿಕೊಂಡು ರೈತರು ಆರ್ಥಿಕ ಅಭಿವೃದ್ಧಿ ಹೊಂದಬೇಕು.
ಯೂರಿಯಾ ಬಳಕೆಯಿಂದ ಭೂಮಿ ಲವತ್ತತೆ ಹಾಳಾಗುತ್ತಿದ್ದು, ಜತೆಗೆ ಮನುಷ್ಯರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ, ಕೃಷಿ ಇಲಾಖೆ ಸಲಹೆ ಪಡೆದು ಬೆಳೆಗಳಿಗೆ ಔಷಧ ಸಿಂಪಡಣೆ ಮಾಡಬೇಕು ಎಂದರು.