ಫೆ.9 ರಿಂದ 13ರವರೆಗೆ ಆರ್ಥಿಕ ಸಾಕ್ಷರತಾ ಸಪ್ತಾಹ

 ಜಿಪಂ ಸಿಇಒ ರಾಹುಲ ಶಿಂಧೆ
ಜಿಪಂ ಸಿಇಒ ರಾಹುಲ ಶಿಂಧೆ
Published on
ಬೆಳಗಾವಿ: ಸಾರ್ವಜನಿಕರಲ್ಲಿ ಬ್ಯಾಂಕಿಂಗ್ ವ್ಯವಹಾರ ಹಾಗೂ ಆರ್ಥಿಕ ಶಿಸ್ತಿನ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಫೆ. 9 ರಿಂದ 13 ರವರೆಗೆ ಜಿಲ್ಲೆಯಾದ್ಯಂತ ಐದು ದಿನಗಳವರೆಗೆ ಆರ್ಥಿಕ ಸಾಕ್ಷರತಾ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಸಿಇಒ ರಾಹುಲ ಶಿಂಧೆ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಹಣಕಾಸು ಸೇವೆಗಳ ಇಲಾಖೆ, ಭಾರತೀಯ ರಿಸರ್ವ್ ಬ್ಯಾಂಕ ಹಾಗೂ ಜಿಲ್ಲಾ ಪಂಚಾಯತಿಯ ನಿರ್ದೇಶನದಂತೆ ಬೆಳಗಾವಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಿಲ್ಲೆಯಾದ್ಯಂತ 779 ಬ್ಯಾಂಕ ಶಾಖೆಗಳಲ್ಲಿ ಹಾಗೂ 500 ಗ್ರಾಪಂ ವ್ಯಾಪ್ತಿಯಲ್ಲಿ ಆರ್ಥಿಕ ಸಾಕ್ಷರತಾ ಸಪ್ತಾಹದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಕೆವೈಸಿ ನಿಮ್ಮ ಗ್ರಾಹಕರನ್ನು ತಿಳಿಯಿರಿ ಎನ್ನುವುದು ಈ ಆರ್ಥಿಕ ಸಪ್ತಾಹದ ವಿಷಯವಾಗಿದೆ. ಪ್ರಾಮುಖ್ಯತೆ ಹಾಗೂ ಓವಿಡಿ ಅಧಿಕೃತವಾಗಿ ಮಾನ್ಯವಾದ ದಾಖಲಾತಿಗಳ ಬಗ್ಗೆ ವಿಚಾರಗಳು, ಮರು ಕೆವೈಸಿ, ವಿಡಿಯೋ ಕೆವೈಸಿ, ಸೆಂಟ್ರಲ್ ಕೆವೈಸಿ, ಆಧಾರ್ ಓಟಿಪಿ ಹೀಗೆ ಹಲವಾರು ಬ್ಯಾಂಕಿನ ವಿಷಯಗಳ ಬಗ್ಗೆ ಮಾಹಿತಿಯನ್ನು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಣಕಾಸು ಸಾಕ್ಷರತಾ ಕೇಂದ್ರಗಳು ಹಾಗೂ ಸಿ.ಎಫ್.ಎಲ್ಸಿ. ಬ್ಯಾಂಕಿನ ವ್ಯವಹಾರ ಪ್ರತಿನಿಧಿಗಳು (ಬಿ.ಸಿ.), ಬ್ಯಾಂಕಿನ ಶಾಖೆಗಳು ಶಿಬಿರವನ್ನು ಏರ್ಪಡಿಸುವ ಮೂಲಕ ಪ್ರಚಾರವನ್ನು ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net