ಮಾದರಿಯಾದ ಪಂಚ ಗ್ಯಾರಂಟಿ

ನಗರದ ಕುಮಾರ ಗಂಧರ್ವ ರಂಗಂಮದಿರದಲ್ಲಿ ಭಾನುವಾರ ಆಯೋಜಿಸಿದ್ದ ಗ್ಯಾರಂಟಿ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯನ್ನು ಸತೀಶ ಜಾರಕಿಹೊಳಿ ಉದ್ಘಾಟಿಸಿದರು. ಎಚ್.ಎಂ.ರೇವಣ್ಣ, ವಿನಯ ನಾವಲಗಟ್ಟಿ, ಎಸ್.ಆರ್.ಪಾಟೀಲ, ಚನ್ನರಾಜ ಹಟ್ಟಿಹೊಳಿ ಇತರರಿದ್ದರು.
ನಗರದ ಕುಮಾರ ಗಂಧರ್ವ ರಂಗಂಮದಿರದಲ್ಲಿ ಭಾನುವಾರ ಆಯೋಜಿಸಿದ್ದ ಗ್ಯಾರಂಟಿ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯನ್ನು ಸತೀಶ ಜಾರಕಿಹೊಳಿ ಉದ್ಘಾಟಿಸಿದರು. ಎಚ್.ಎಂ.ರೇವಣ್ಣ, ವಿನಯ ನಾವಲಗಟ್ಟಿ, ಎಸ್.ಆರ್.ಪಾಟೀಲ, ಚನ್ನರಾಜ ಹಟ್ಟಿಹೊಳಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಚಿವ ಸತೀಶ ಜಾರಕಿಹೊಳಿ ಅಭಿಮತ
  • ಪ್ರಗತಿ ಪರಿಶೀಲನಾ ಸಭೆ
ಬೆಳಗಾವಿ: ರಾಜ್ಯ ಸರ್ಕಾರದ ಅವಧಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವುದು ದೇಶಕ್ಕೆ ಮಾದರಿ ಆಗಿದೆ. ರಾಜ್ಯ ಸರ್ಕಾರ ಬಡವರ ಪರವಾಗಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದ ಕುಮಾರ ಗಂಧರ್ವ ರಂಗಂಮದಿರದಲ್ಲಿ ಜಿಲ್ಲಾಡಳಿತ, ಜಿ.ಪಂ ಇವರ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಪಂಚ ಗ್ಯಾರಂಟಿ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಪಂಚ ಗ್ಯಾರಂಟಿ ಯೋಜನೆ ಜಾರಿಗೂ ಮುನ್ನ ಅನೇಕ ಟೀಕೆಗಳು ಎದುರಾದರೂ ಸಹ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಬಡ ಜನರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪ್ರತಿವರ್ಷ ಬಡವರ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ನೀಡುತ್ತಿದೆ. ಈ ಯೋಜನೆ ರಾಜ್ಯದ ಪ್ರತಿಯೊಬ್ಬ ಫಲಾನುಭವಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದರು.
ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಡಿ.ದೇವರಾಜ ಅರಸು ಅವರ ಉಳುವವನೇ ಒಡೆಯ, ಬಂಗಾರಪ್ಪನವರ ಆಶ್ರಯ ಯೋಜನೆ, ರೈತರಿಗೆ ಉಚಿತ ವಿದ್ಯುತ್, ವೀರಪ್ಪ ಮೊಯಲಿ ಅವರ ಸಿಇಟಿ ವ್ಯವಸ್ಥೆ, ಎಸ್.ಎಂ ಕೃಷ್ಣ ಅವರ ಆರ್ಥಿಕ ಮತ್ತು ಐಟಿ ಯೋಜನೆಗಳಂತೆ ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ಯಾರಂಟಿ ಯೋಜನೆಗಳು ಸೇರಿದಂತೆ ಹಲವು ಜನಪರ ಯೋಜನೆ ಜಾರಿಗೆ ತಂದಿದ್ದಾರೆ ಎಂದು ಬಣ್ಣಿಸಿದರು.
ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ವಿಪ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಕುಮಾರ ಗಂಧರ್ವ ರಂಗಂಮದಿರದವರೆಗೆ ಕುಂಭ ಮೆರವಣಿಗೆ ಜರುಗಿತು.
ಶಾಸಕ ಆಸೀಫ್ ಸೇಠ, ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಕಾಡಾ ಅಧ್ಯಕ್ಷ ಯುವರಾಜ ಕದಂ, ವಾಯವ್ಯ ಸಾರಿಗೆ ಸಂಸ್ಥೆ ಉಪಾಧ್ಯಕ್ಷ ಸುನೀಲ ಹನುಮಣ್ಣವರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಮಹಿಳಾ ಮತ್ತು ಮಕ್ಕಳ

ಮುಂಬರುವ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟ ತಾಂತ್ರಿಕ ಲೋಪಗಳನ್ನು ಸರಿಪಡಿಸಲಾಗುವುದು. ಗ್ಯಾರಂಟಿ ಯೋಜನೆಗಳ ಜತೆ ನೀರಾವರಿ, ರಸ್ತೆ, ಶಿಕ್ಷಣ ಸೇರಿ ಇನ್ನಿತರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯಾಗಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net