ಹೌದು. ಸರ್ಕಾರವು ಗ್ರಾಮೀಣ ಮಹಿಳೆಯರಿಗೆ ಸ್ವಾವಲಂಬನೆ, ಸ್ಥಳೀಯ ಮಟ್ಟದಲ್ಲಿ ಉದ್ಯೋಗ, ಮಕ್ಕಳಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಹಾಗೂ ಗ್ರಾಮೀಣ ಆರ್ಥಿಕತೆಗೆ ಚೈತನ್ಯ ನೀಡುವ ಉದ್ದೇಶದಿಂದ ಕುಕ್ಕುಟ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸಿದೆ. ಈ ಯೋಜನೆ ಅಡಿಯಲ್ಲಿ ಕೋಳಿ ಸಾಕಾಣಿಕೆ ಮಾಡಿ ಮೊಟ್ಟೆ ಉತ್ಪಾದಿಸಿ ಮಾರಾಟ ಮಾಡುತ್ತಿರುವ ಮಹಿಳಾ ಸ್ವಸಹಾಯ ಸಂಘಗಳಿಗೆ ಸರ್ಕಾರಿ ಶಾಲಾ ಮಕ್ಕಳಿಗೆ ತಾಜಾ ಮೊಟ್ಟೆ ವಿತರಣೆಗೆ ಸರ್ಕಾರ ಅವಕಾಶ ಕಲ್ಪಿಸಿದೆ.