ಹಳ್ಳಿಗಳಲ್ಲಿ ಕಸ ವಿಲೇವಾರಿ ಕಡ್ಡಾಯ

ಬೆಳಗಾವಿ ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ರಾಹುಲ ಶಿಂಧೆ ಮಾತನಾಡಿದರು. ರವಿ ಬಂಗಾರೆಪ್ಪನವರ, ಬಸವರಾಜ ಹೆಗ್ಗನಾಯಕ, ಗಂಗಾಧರ ದಿವಟರ ಇತರರಿದ್ದರು
ಬೆಳಗಾವಿ ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ರಾಹುಲ ಶಿಂಧೆ ಮಾತನಾಡಿದರು. ರವಿ ಬಂಗಾರೆಪ್ಪನವರ, ಬಸವರಾಜ ಹೆಗ್ಗನಾಯಕ, ಗಂಗಾಧರ ದಿವಟರ ಇತರರಿದ್ದರು
Published on
ಬೆಳಗಾವಿ:ಗ್ರಾಮೀಣ ಪ್ರದೇಶದಲ್ಲಿ ಸಮಯಕ್ಕೆ ಸರಿಯಾಗಿ ಕಸ ವಿಲೇವಾರಿ ಕಡ್ಡಾಯ, ಚರಂಡಿ, ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳದಿದ್ದರೆ ಸಂಬಂಧಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿಪಂ ಸಿಇಒ ರಾಹುಲ ಶಿಂಧೆ ಎಚ್ಚರಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕಸ ವಿಲೇವಾರಿಯಿಂದ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮವಹಿಸಬೇಕು. ನೀರಿನ ಮೂಲಗಳ ಸುತ್ತಮುತ್ತ ಹಾಗೂ ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಚತೆ ಕಾಪಾಡಲು ಅಗತ್ಯ ಕ್ರಮಕೈಗೊಳ್ಳಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ಮಾಡಬೇಕು ಎಂದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಕುಡಿಯುವ ನೀರಿನ ಸಮರ್ಪಕ ಬಳಕೆ ಹಾಗೂ ಸ್ವಚ್ಛತೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಎಲ್ಲವನ್ನು ಗ್ರಾಪಂ ಸಿಬ್ಬಂದಿ ಮೇಲೆ ಹೊರೆ ಮಾಡದೆ ಸಂಬಂಧಿಸಿದ ಇಲಾಖೆ ಅಧಿಕಾರಿ, ಸಿಬ್ಬಂದಿ ಕೂ ಜೋಡಿಸಬೇಕು.ಪ್ರತಿ ಶನಿವಾರ ಗ್ರಾಮಗಳಲ್ಲಿ ಶ್ರಮದಾನ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ನಿರ್ದೇಶನ ನೀಡಿದರು.
ಕುಡಿಯುವ ನೀರು ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ದೂರುಗಳು ಬಂದರೇ ಸಂಬಂಧಪಟ್ಟ ಇಂಜಿನಿಯರ ಹೊಣೆಗಾರರನ್ನಾಗಿ ಮಾಡಲಾಗುವುದು . ಇಂಜಿನಿಯರಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಂದ ದೂರುಗಳು ಬಂದರೆ ಕೂಡಲೇ ಸ್ಪಂದಿಸಬೇಕು. ಎಲ್ಲ ಗ್ರಾಮಗಳಲ್ಲಿ ನೀರಿನ ಮಾದರಿ ಪರೀಕ್ಷೆ ಕೈಗೊಳ್ಳಬೇಕು. ನೀರಿನ ಟ್ಯಾಂಕರ ನಿಯಮಿತವಾಗಿ ಸ್ವಚ್ಛಗೊಳಿಸಬೇಕು ಎಂದು ತಿಳಿಸಿದರು
ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ, ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಟರ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಳಗಾವಿ ವಿಭಾಗದ ಕಾರ್ಯಪಾಲಕ ಅಭಿಯಂತರ ಕಿರಣ ಘೋರ್ಪಡೆ, ಚಿಕ್ಕೋಡಿ ವಿಭಾಗದ ಕಾರ್ಯಪಾಲಕ ಅಭಿಯಂತರ ಪಾಂಡುರಂಗರಾವ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net