ಪದವೀಧರರಿಗೆ ಆದ್ಯತೆ ನೀಡಿ

ಡಿಸಿಸಿ ಬ್ಯಾಂಕ್ ನೇಮಕಾತಿಯಲ್ಲಿ ಪದವೀಧರರಿಗೆ ಆದ್ಯತೆ ನೀಡಲು ಆಗ್ರಹಿಸಿ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘದಿಂದ ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಡಿಸಿಸಿ ಬ್ಯಾಂಕ್ ನೇಮಕಾತಿಯಲ್ಲಿ ಪದವೀಧರರಿಗೆ ಆದ್ಯತೆ ನೀಡಲು ಆಗ್ರಹಿಸಿ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘದಿಂದ ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
Published on

ಬೆಳಗಾವಿ :

ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರ ಬ್ಯಾಂಕ್(ಡಿಸಿಸಿ)ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಕಿರಿಯ ಸಹಾಯಕ ಸ್ಥಾನಗಳಿಗೆ ಕೇವಲ ಬಿಎ,ಬಿಎಸ್ಸಿ ಮತ್ತು ಬಿಕಾಂ ಪದವೀಧರರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ

ಈ ಸಂಬಂಧ ಸಂಘಟನೆಯ ಜಿಲ್ಲಾ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮತ್ತು ಡಿಸಿಸಿ ಬ್ಯಾಂಕ್ ಸಿಇಒಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಇಡೀ ನೇಮಕಾತಿ ಪಕ್ರಿಯೆಲ್ಲಿ ಬಿಬಿಎ ಪದವಿ ಹೊಂದಿರುವ ಅಭ್ಯರ್ಥಿಗಳಿಗೆ ಯಾವುದೇ ಅವಕಾಶ ಕಲ್ಪಿಸಿಲ್ಲ. ಬಿವಿಎ ಕೂಡ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ಪದವಿಯಾಗಿದೆ. ಈ ಪದವಿ ಪೂರೈಸಿದ ನೂರಾರು ಯುವಕರ ಭವಿಷ್ಯದ ಹಿತದೃಷ್ಟಿಯಿಂದ ಈ ಕೋರ್ಸ್ ಮುಗಿಸಿದವರನ್ನೂ ಪರಿಗಣಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಸಂಘದ ಜಿಲ್ಲಾ ಅಧ್ಯಕ್ಷ ನಾಗರಾಜ ಎ.ಜಿ., ಉಪಾಧ್ಯಕ್ಷ ನಾಮದೇವ ಎಚ್., ಮಂಜುನಾಥ ಎ.ಜಿ., ಮೇಘಾ ಗಣಿಕೊಪ್ಪ, ಸಿದ್ದು ರಡರಟ್ಟಿ, ಉಮೇಶ ಪೂಜೇರಿ, ಪ್ರವೀಣ ಪಾಟೀಲ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net