ಮೇಯರ್ ಸ್ಥಾನ ವೀರಶೈವ-ಲಿಂಗಾಯತರಿಗೆ ನೀಡಿ

ಮಹಾನಗರ ಪಾಲಿಕೆ
ಮಹಾನಗರ ಪಾಲಿಕೆ
Published on
ಬೆಳಗಾವಿ: ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಮಹಾಪೌರ ಸ್ಥಾನ ವೀರಶೈವ-ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾಧ್ಯಕ್ಷೆ ರತ್ನಪ್ರಭಾ ಬೆಲ್ಲದ ಒತ್ತಾಯಿಸಿದ್ದಾರೆ.
ಮೇಯರ್ ಸ್ಥಾನ ಸಾಮಾನ್ಯ ಮಹಿಳೆ, ಉಪ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಸೇರಿದ್ದು, ಇಂತಹ ಸಂದರ್ಭದಲ್ಲಿ ವೀರಶೈವ-ಲಿಂಗಾಯತ ಸಮುದಾಯದ ಅಭ್ಯರ್ಥಿಯನ್ನು ಕಡೆಗಣಿಸುತ್ತಿರುವುದು ಸರಿಯಲ್ಲ.
ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ವೀರಶೈವ ಲಿಂಗಾಯತ ಸಮುದಾಯದ ಕೊಡುಗೆ ಬಹು ಮುಖ್ಯ. ಈ ಸಮುದಾಯವನ್ನು ಕಡೆಗಣಿಸದೆ ಮೇಯರ್ ಹುದ್ದೆಗೆ ಪರಿಗಣಿಸಬೇಕೆಂದು ಪ್ರಕರಣೆ
ಮೂಲಕ ಆಗ್ರಹಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net