ಬೆಳಗಾವಿ: ಗಡಿಭಾಗದಲ್ಲಿ ಗುಣಮಟ್ಟದ ವೈದ್ಯಕೀಯ ಶಿಕ್ಷಣ ನೀಡುವ ಮೂಲಕ ಡಾ.ರವಿ ಪಾಟೀಲ ಅವರ ಸಂಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟರು.
ತಾಲೂಕಿನ ಹೊನಗಾ ಗ್ರಾಮದಲ್ಲಿರುವ ಡಾ.ರವಿ ಪಾಟೀಲ ಆರೋಗ್ಯ ಸಂಸ್ಥೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಸಂಸ್ಥೆಯ ಬಿಎಸ್ಸಿ ನರ್ಸಿಂಗ್, ಬಿಎಸ್ಸಿ ಅಲೈಡ್ ಹೆಲ್ತ್ ಸೈನ್ಸಸ್, ಜೆನ್‌ಎಂ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಸದೃಢ ಸಮಾಜ ನಿರ್ಮಾಣದಲ್ಲಿ ವೈದ್ಯಕೀಯ ವೃತ್ತಿ ಕಾರ್ಯ ಅಪಾರವಾಗಿದೆ. ವಿದ್ಯಾರ್ಥಿಗಳು ಸೇವಾ ಭಾವ ಬೆಳೆಸಿಕೊಳ್ಳಬೇಕು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗತಿಕವಾಗಿ ಆರೋಗ್ಯ ಕ್ಷೇತ್ರದಲ್ಲಿ ಉದ್ಯೋಗ ಅವಕಾಶಗಳು ವಿುಲವಾಗಿವೆ ಎಂದರು.
ವಿಪ ಸದಸ್ಯ ಡಾ.ಎಂ.ಜಿ.ಮುಳೆ, ಸಂಸ್ಥೆಯ ಅಧ್ಯಕ್ಷ ಡಾ.ರವಿ ಪಾಟೀಲ, ಡಾ.ಸೋಮಶೇಖರ ಪೂಜಾರ, ಸೋನಾಲಿ ಭವಾನೆ, ಡೇವಿಡ್ ಕೋಲಾ ಇತರರಿದ್ದರು.