ಯಕ್ಕುಂಡಿ: ರಾಜ್ಯ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆ ಪಂಚ ಗ್ಯಾರಂಟಿ ಯೋಜನೆ ಜನಸಾಮಾನ್ಯರಿಗೆ ಬಹಳಷ್ಟು ಅನುಕೂಲವಾಗಿವೆ ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಸದಸ್ಯ ವಿಷ್ಣು ಕಾರಭಾರಿ ಹೇಳಿದರು.
ಇಲ್ಲಿನ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಜಾಗೃತಿ ಮತ್ತು ಕಾರ್ಯಾಗಾರ ಸಭೆಯಲ್ಲಿ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳಿಂದ ಯಾರಾದರೂ ವಂಚಿತರಾಗಿದ್ದಲ್ಲಿ ಸೂಕ್ತ ದಾಖಲೆ ಸಲ್ಲಿಸಿದರೆ ಸಮಸ್ಯೆಗೆ ಸ್ಪಂದಿಸಲಾಗುವುದು ಎಂದು ತಿಳಿಸಿದರು.
ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಕುಮಾರ ರಾಠೋಡ ಮಾತನಾಡಿ, ಜನರ ಜೀವನಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆ ಜಾರಿಗೊಳಿಸಿದೆ. ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಪಿಡಿಒ ವೈ.ಪಿ.ಬೋಳಶೆಟ್ಟಿ, ಎಸಿಡಿಪಿಒ ಚೇತನಾ ಹಳ್ಳಿ ಮಾತನಾಡಿದರು. ಗ್ರಾಪಂ ಸದಸ್ಯ ಹಸನಸಾಬ್ ಬಾರಿಗಿಡದ, ಒಕ್ಕೂಟದ ಅಧ್ಯಕ್ಷೆ ಸೈನಾಜ್ ಮುಜಾವರ, ಸುಶೀಲಾ ವೀರೇಶನವರ, ರವಿ ತಿಮ್ಮೇಶಿ, ಬಸವರಾಜ ಹೂಗಾರ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮಹಿಳಾ ಸಂಘದ ಸದಸ್ಯರು ಇತರರಿದ್ದರು. ಪ್ರಕಾಶ ಕಮ್ಮಾರ ನಿರೂಪಿಸಿದರು.