ಗೃಹ ಜ್ಯೋತಿ ಯೋಜನೆಯ ಸದುಪಯೋಗ ಬೇರೆ ರಾಜ್ಯದ ಫಲಾನುಭವಿಗಳು ಬಳಸುತ್ತಿರುವುದನ್ನೂ ಗುರುತಿಸುವ ಕಾರ್ಯ ಪ್ರಾರಂಭಿಸಲಾಗಿದೆ. ಗ್ಯಾರಂಟಿ ಯೋಜನೆಯಡಿ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಪಟ್ಟಿಯಿಂದ ಕೈಬಿಟ್ಟಲ್ಲಿ ಅರ್ಹ ಫಲಾನುಭವಿಗಳಿಗೆ ಇನ್ನೂ ಹೆಚ್ಚಿನ ಸೌಲಭ್ಯ ನೀಡಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಪ್ರಾಧಿಕಾರದ, ಜಿಲ್ಲಾ, ತಾಲೂಕು ಅಧ್ಯಕ್ಷರು, ಸದಸ್ಯರು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.