ಹರ್ ಘರ್ ತಿರಂಗಾ ಅಭಿಯಾನ ಹೆಮ್ಮೆಯ ಸಂಕೇತ

 ಬೆಳಗಾವಿ ನಗರದ ಬಿಜೆಪಿ ಗ್ರಾಮೀಣ ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ  ಹರ್‌ಘರ್ ತಿರಂಗಾ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಲಿಂಗರಾಜ ಪಾಟೀಲ ಮಾತನಾಡಿದರು. ಸುಭಾಷ ಪಾಟೀಲ, ಸಂಜಯ ಪಾಟೀಲ,  ಡಾ. ವಿಶ್ವನಾಥ ಪಾಟೀಲ, ಅರವಿಂದ ಪಾಟೀಲ ಇತರರಿದ್ದರು.
ಬೆಳಗಾವಿ ನಗರದ ಬಿಜೆಪಿ ಗ್ರಾಮೀಣ ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಹರ್‌ಘರ್ ತಿರಂಗಾ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಲಿಂಗರಾಜ ಪಾಟೀಲ ಮಾತನಾಡಿದರು. ಸುಭಾಷ ಪಾಟೀಲ, ಸಂಜಯ ಪಾಟೀಲ, ಡಾ. ವಿಶ್ವನಾಥ ಪಾಟೀಲ, ಅರವಿಂದ ಪಾಟೀಲ ಇತರರಿದ್ದರು.
Published on

ಬೆಳಗಾವಿ:

ಪ್ರಧಾನಮಂತ್ರಿ ನರೇಂದ್ರ ಮೋದಿಯ ಕರೆಯ ಮೇರೆಗೆ ಆರಂಭಗೊಂಡಿರುವ ’ಹರ್ ಘರ್ ತಿರಂಗಾ’ ಅಭಿಯಾನವು ರಾಷ್ಟ್ರೀಯ ಅಭಿಯಾನವಾಗಿ ರೂಪುಗೊಂಡಿದ್ದು, ಪ್ರತಿಯೊಬ್ಬ ಭಾರತೀಯನಲ್ಲೂ ತಿರಂಗಾ ಧ್ವಜದ ಬಗ್ಗೆ ಹೆಮ್ಮೆ ಹಾಗೂ ಗೌರವದ ಭಾವನೆ ಬೆಳೆಸುವಲ್ಲಿ ಯಶಸ್ವಿಯಾಗಿದೆ ಎಂದು ವಿಧಾನಪರಿಷತ ಸದಸ್ಯ ಲಿಂಗರಾಜ ಪಾಟೀಲ ಹೇಳಿದರು.

ನಗರದ ಬಿಜೆಪಿ ಗ್ರಾಮೀಣ ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಹರ್‌ಘರ್ ತಿರಂಗಾ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ರಾಷ್ಟ್ರಧ್ವಜದ ಗೌರವವನ್ನು ಮನೆಮನೆಗೆ ತಲುಪಿಸುವ ಉದ್ದೇಶದಿಂದ ಆ.11ರಿಂದ 15ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬರು ಭಾಗವಹಿಸುವ ಮೂಲಕ ಯಶಸ್ವಿಗೊಳಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಮಾತನಾಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ ಸೂಚನೆಯಂತೆ ನಡೆಯಲಿರುವ ಹರ್ ಘರ್ ತಿರಂಗಾ ಅಭಿಯಾನ ಹಾಗೂ ತಿರಂಗಾ ಯಾತ್ರೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ಮಾಜಿ ಶಾಸಕಾರದ ಸಂಜಯ ಪಾಟೀಲ, ಡಾ. ವಿಶ್ವನಾಥ ಪಾಟೀಲ, ಅರವಿಂದ ಪಾಟೀಲ, ರಾಷ್ಟ್ರೀಯ ಓಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ, ಬಿಜೆಪಿ ಮಹಿಳಾ ಮೋರ್ಚಾ ಮುಖಂಡೆ ಡಾ.ಸೋನಾಲಿ ಸರ್ನೋಬತ್,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಮಾದಮ್ಮನವರ, ಸಂದೀಪ ದೇಶಪಾಂಡೆ, ಧನಶ್ರೀ ದೇಸಾಯಿ, ಅಭಿಯಾನದ ಸಂಚಾಲಕರಾದ ಮಹೇಶ ಮೋಹಿತೆ, ಮನೋಜ ಪಾಟೀಲ, ಪ್ರಮೋದ ಕೊಚೇರಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net