ಕುಡಚಿ: ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಈಗಿನಿಂದಲೇ ರೂಢಿಸಿಕೊಳ್ಳಬೇಕು ಎಂದು ನಿವೃತ್ತ ಮುಖ್ಯಶಿಕ್ಷಕ ಆರ್.ಎಂ.ಸನದಿ ಹೇಳಿದರು.
ಸಮೀಪದ ಗುಂಡವಾಡ ಗ್ರಾಮದಲ್ಲಿ ಕುಡಚಿಯ ಡಾ.ಬಾಬಾಸಾಹೇಬ ಅಂಬೇಡ್ಕರ್ ಶಿಕ್ಷಣ ಸಂಸ್ಥೆಯ ಬಿ.ಶಂಕರಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ ಆಶ್ರಯದಲ್ಲಿ ಸೋಮವಾರ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಎನ್‌ಎಸ್‌ಎಸ್ ಅನುಭವ ಬದುಕಿಗೆ ರಹದಾರಿಯಾಗಲಿದೆ ಎಂದರು.
ಪ್ರಾಚಾರ್ಯ ಎ.ಎಸ್.ಕಾಂಬಳೆ ಮಾತನಾಡಿ, ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆ ಲಾಭ ಪಡೆದುಕೊಳ್ಳಬೇಕು ಎಂದರು. ಸಹಕಾರ ನೀಡಿದ ಗ್ರಾಮಸ್ಥರನ್ನು ಸನ್ಮಾನಿಸಲಾಯಿತು.
ತಾಪಂ ಮಾಜಿ ಅಧ್ಯಕ್ಷ ಸುಖಮಾರ ಪಾಟೀಲ, ಗಂಗಾರಾಮ ಪೂಜೇರಿ, ಮಲಗೌಡ ಪಾಟೀಲ, ಸಂತೋಷ ಪಾಟೀಲ, ರಾಜೇಂದ್ರ ಪಾಟೀಲ, ಅನಿಲಕುಮಾರ ಉಗಾರೆ, ಕಲಗೌಡ ಪಾಟೀಲ, ರಾವಸಾಹೇಬ ಪಾಟೀಲ, ಎನ್‌ಎಸ್‌ಎಸ್ ಕಾರ್ಯಕ್ರಮ ಅಽಕಾರಿ ಪ್ರೊ.ಆರ್.ಎಂ.ಮಹೇಶವಾಡಗಿ ಇತರರಿದ್ದರು.