ಹೈಟೆಕ್ ಹಾರ್ವೆಸ್ಟರ್ ಹಬ್; ರೈತರಿಗೆ ಸಹಾಯಧನ

ಕೃಷಿ ಯಾಂತ್ರೀಕರಣ
ಕೃಷಿ ಯಾಂತ್ರೀಕರಣ
Published on
ಬೆಳಗಾವಿ: ಕೃಷಿ ಯಾಂತ್ರೀಕರಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ 2026-27ನೇ ಸಾಲಿನ ಹೈಟೆಕ ಹಾರ್ವೆಸ್ಟರ ಹಬ್ ಯೋಜನೆಯಡಿ ಅರ್ಹ ರೈತರು, ಕೃಷಿ ಯಂತ್ರಧಾರೆ ಕೇಂದ್ರಗಳು ಹಾಗೂ ನೋಂದಾಯಿತ ಸಂಘ-ಸಂಸ್ಥೆಗಳಿಂದ ಕೃಷಿ ಇಲಾಖೆ ಅರ್ಜಿಗಳನ್ನು ಆಹ್ವಾನಿಸಿದೆ.
ಈಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಗರಿಷ್ಠ ಶೇ.70 ಮತ್ತು ಸಂಘ-ಸಂಸ್ಥೆಗಳಿಗೆ ಗರಿಷ್ಠ ಶೇ.70ರಷ್ಟು ಸಹಾಯಧನ ನೀಡಲಾಗುತ್ತಿದ್ದು, ಆ.31ರ ಒಳಗಾಗಿ ಅರ್ಜಿ ಸಲ್ಲಿಸಬೇಕು.ಜಿಲ್ಲೆಗೆ 13 ಶುಗರ್‌ಕೇನ್ ಹಾರ್ವೆಸ್ಟರ್ ಹಬ್‌ಗಳ ಗುರಿ ನಿಗದಿಯಾಗಿದ್ದು, 12 ವೈಯಕ್ತಿಕ ಫಲಾನುಭವಿಗಳು ಹಾಗೂ ಒಂದು ಸಂಘ-ಸಂಸ್ಥೆಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಒಂದು ಕಂಬೈನ್ಡ್ ಹಾರ್ವೆಸ್ಟರ್ ಹಬ್‌ಗೂ ಪ್ರತ್ಯೇಕ ಗುರಿ ನೀಡಲಾಗಿದೆ.
ಜಿಲ್ಲಾ ಮಟ್ಟದ ಉಪಕರಣ ಸಮಿತಿ ಸಭೆಯಲ್ಲಿ ಅರ್ಹ ಫಲಾನುಭವಿಗಳ ಆಯ್ಕೆ ನಡೆಯಲಿದ್ದು, ಪ್ರಸಕ್ತ ಸಾಲಿನಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಕಳೆದ ಸಾಲಿನಲ್ಲಿ ಸಲ್ಲಿಸಿದ್ದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.ಅರ್ಜಿ ಸಲ್ಲಿಸುವವರು ಅಗತ್ಯ ದಾಖಲೆಗಳೊಂದಿಗೆ ಸಂಬಂಧಿತ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕ ಎಚ್.ಡಿ.ಕೋಳೇಕರ್ ಮಾಹಿತಿ ನೀಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net