ಆರೋಪಿ ಬಂಧನದ ವೇಳೆ ಹೈಡ್ರಾಮಾ! Accused

ಮಂಗಳೂರಿನ (Accused) ಮಹಮ್ಮದ್ ರಫೀಕ್ ಇಸ್ಮಾಯಿಲ್
ಮಂಗಳೂರಿನ (Accused) ಮಹಮ್ಮದ್ ರಫೀಕ್ ಇಸ್ಮಾಯಿಲ್
Published on
ಯಲ್ಲಾಪುರ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು (Accused) ಬಂಧಿಸಲು ಬೆಳಗಾವಿಗೆ ತೆರಳಿದ್ದ ಯಲ್ಲಾಪುರ ಪೊಲೀಸರ ಮೇಲೆ ಆರೋಪಿ ಹಲ್ಲೆ ನಡೆಸಿದ್ದಲ್ಲದೇ ಚಾಕು ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಮಂಗಳೂರಿನ ಮಹಮ್ಮದ್ ರಫೀಕ್ ಇಸ್ಮಾಯಿಲ್ ಎಂಬಾತನನ್ನು ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧಿಸಲು ಯಲ್ಲಾಪುರ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಬೆಳಗಾವಿಗೆ ತೆರಳಿದ್ದರು.
ಬೆಳಗಾವಿಯ ಖಾಸಭಾಗ ವಾಲಿ ಚೌಕದ ಬಳಿ ಇರುವ ವೋಡ್ಕಾ ಬಾರ್ ಬಳಿ ಈತನನ್ನು ಬಂಧಿಸಲು ಮುಂದಾದ ಪಿಎಸ್‌ಐಗಳಾದ ರಾಜಶೇಖರ ವಂದಲಿ ಹಾಗೂ ಸಿದ್ದಪ್ಪ ಗುಡಿ ಅವರ ಮೇಲೆ ಆರೋಪಿ ಹಲ್ಲೆಗೆ ಮುಂದಾಗಿದ್ದಾನೆ.
ಈ ವೇಳೆ ಪಿಎಸ್‌ಐಗಳ ರಕ್ಷಣೆಗೆ ಧಾವಿಸಿದ ಸಿಬ್ಬಂದಿ ಮಹಮ್ಮದ್ ಶಫಿ ಅವರ ಮೇಲೂ ಹಲ್ಲೆ ನಡೆಸಿದ್ದಾನೆ. 
ನಂತರ ಪೊಲೀಸರಿಂದ ತಪ್ಪಿಸಿಕೊಳ್ಳಲು ಚಾಕುವಿನಿಂದ ಹೊಟ್ಟೆಗೆ ಚುಚ್ಚಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ, ಆತ್ಮಹತ್ಯೆಗೆ ಯತ್ನಿಸಿದ ಮಹಮ್ಮದ್ ರಫೀಕ್ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net