ಕರ್ನಾಟಕ ಪರ ರ್ನಿಣಯ ಕೈಗೊಳ್ಳದಿದ್ದರೆ ಕ್ರಾಂತಿ

ಬೆಳಗಾವಿ ಮಹಾನಗರ ಪಾಲಿಕೆ ಸಭೆಯಲ್ಲಿ ಕನ್ನಡಪರ ರ್ನಿಣಯ ಕೈಗೊಳ್ಳುವಂತೆ ಒತ್ತಾಯಿಸಿ ಕನ್ನಡಪರ ಸಂಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಾಟಾಳ್​ ನಾಗರಾಜ ಮಾತನಾಡಿದರು. ಸಾ.ರಾ.ಗೋವಿಂದು, ಅಶೋಕ ಚಂದರಗಿ, ಜಿಲ್ಲಾಧಿಕಾರಿ ಮೊಹಮ್ಮದ್​ ರೋಷನ್​ ಇದ್ದರು.
ಬೆಳಗಾವಿ ಮಹಾನಗರ ಪಾಲಿಕೆ ಸಭೆಯಲ್ಲಿ ಕನ್ನಡಪರ ರ್ನಿಣಯ ಕೈಗೊಳ್ಳುವಂತೆ ಒತ್ತಾಯಿಸಿ ಕನ್ನಡಪರ ಸಂಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಾಟಾಳ್​ ನಾಗರಾಜ ಮಾತನಾಡಿದರು. ಸಾ.ರಾ.ಗೋವಿಂದು, ಅಶೋಕ ಚಂದರಗಿ, ಜಿಲ್ಲಾಧಿಕಾರಿ ಮೊಹಮ್ಮದ್​ ರೋಷನ್​ ಇದ್ದರು.
Published on
ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ ಸಭೆಯಲ್ಲಿ ಕನ್ನಡಪರ ರ್ನಿಣಯ ಕೈಗೊಳ್ಳುವುದಕ್ಕೂ ಹೋರಾಟ ಮಾಡಬೇಕಿದೆ. ಬೆಳಗಾವಿಯಲ್ಲಿ ಇಂತಹ ಪರಿಸ್ಥಿತಿಗೆ ಇಲ್ಲಿನ ಸ್ವಾರ್ಥ ರಾಜಕಾರಣಿಗಳೇ ಕಾರಣ. ಪಾಲಿಕೆಯಲ್ಲಿ ಕರ್ನಾಟಕ ಪರ ರ್ನಿಣಯ ಕೈಗೊಳ್ಳದಿದ್ದರೆ ಬೆಳಗಾವಿಯಲ್ಲಿ ಕ್ರಾಂತಿ ಆಗಲಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜ ಎಚ್ಚರಿಕೆ ನೀಡಿದರು.
ನಗರದ ಮಹಾನಗರ ಪಾಲಿಕೆಯಲ್ಲಿ ಕನ್ನಡಪರ ರ್ನಿಣಯ ಕೈಗೊಳ್ಳುವಂತೆ ಒತ್ತಾಯಿಸಿ 20ಕ್ಕೂ ಅಧಿಕ ಕನ್ನಡಪರ ಸಂಟನೆಗಳು ಮಂಗಳವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿದರು.
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಕನ್ನಡಪರ ರ್ನಿಣಯ ಕೈಗೊಳ್ಳಲು ಜೂ.2ರವರೆಗೆ ಗಡವು ನೀಡಲಾಗಿದೆ. ಅಷ್ಟರೊಳಗೆ ಬೇಡಿಕೆ ಈಡೇರದಿದ್ದರೆ ಜೂ.4ರಂದು ರಾಜ್ಯ ಮಟ್ಟದ ಸಭೆ ನಡೆಸಿ ಅಖಂಡ ಕರ್ನಾಟಕ ಬಂದ್​ಗೆ ಕರೆ ನೀಡಲಾಗುವುದು. ರಾಜ್ಯ ಸರ್ಕಾರ ಕರ್ನಾಟಕ ಪರ ರ್ನಿಣಯ ಮಾಡಿಸಿ, ಇಲ್ಲವಾದರೆ ಮಹಾನಗರ ಪಾಲಿಕೆ ವಜಾ ಮಾಡಲಿ ಎಂದು ಒತ್ತಾಯಿಸಿದರು.
ಕನ್ನಡ ಹೋರಾಟಗಾರ ಸಾ.ರಾ.ಗೋವಿಂದು ಮಾತನಾಡಿ, ಕರ್ನಾಟಕ ಪರ ರ್ನಿಣಯಕ್ಕಾಗಿ ಯಾವುದೇ ಹೋರಾಟಕ್ಕೂ ಸಿದ್ಧ ಎಂದರು.
ಜಿಲ್ಲಾಧಿಕಾರಿ ಕಚೇರಿಯಿಂದ ಪಾಲಿಕೆಗೆ ಮುತ್ತಿಗೆ ಹಾಕಲು ಮುಂದಾದ ಕನ್ನಡಪರ ಹೋರಾಟಗಾರರನ್ನು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪೊಲೀಸರು ವಶಕ್ಕೆ ಪಡೆದರು.
ಪ್ರತಿಭಟನೆಗೂ ಮೊದಲು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮರು ಸ್ಥಾಪಿಸಿರುವ ಹಲ್ಮಿಡಿ ಶಾಸನದ ಪ್ರತಿಕೃತಿಗೆ ಹೋರಾಟಗಾರರು ರಾಭಿಷೇಕ ಮಾಡಿ ಪೂಜೆ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಅಶೋಕ ಚಂದರಗಿ, ವಾಜೀದ್​ ಹಿರೆಕೋಡಿ, ಶ್ರೀನಿವಾಸ ತಾಳೂರಕರ್​, ಮಹಾದೇವ ತಳವಾರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net