ನಗರದ ಗೃಹಕಚೇರಿಯಲ್ಲಿ ಗುರುವಾರ ಅಧಿಕಾರಿಗಳ ನಡೆದ ಸಭೆಯಲ್ಲಿ ಮಾತನಾಡಿ,ರಾಜ್ಯಾದ್ಯಂತ ಸ್ಥಳೀಯ ಜನಸಂಖ್ಯೆಯ ಆಧಾರದ ಮೇಲೆ ಒಟ್ಟು 10,000 ಯುವ ಸಂಘಗಳನ್ನು ರಚಿಸಲಾಗುತ್ತಿದ್ದು, ಪ್ರತಿ ಸಂಘಕ್ಕೆ ವಾರ್ಷಿಕ 10 ಲಕ್ಷ ರೂ. ಅನುದಾನ ಒದಗಿಸುವ ಉದ್ದೇಶ ಹೊಂದಲಾಗಿದೆ. ಈ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಜನರನ್ನು ಸಂಘಟಿಸಿ, ಅವರಲ್ಲಿ ನಾಯಕತ್ವದ ಗುಣ ಬೆಳೆಸುವುದರ ಜೊತೆಗೆ ಕ್ರೀಡೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಸರ್ಕಾರ ಮುಂದಾಗಿದೆ ಎಂದರು.