ಮೋದಿಜಿ ದೂರದೃಷ್ಟಿಯಿಂದ ಭಾರತ ಬಲಾಢ್ಯ

ಗೋಕಾಕ ಎನ್‌ಎಸ್‌ಎ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಬಿಎಲ್‌ಎ-2 ಕಾರ್ಯಾಗಾರ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ ಸಭೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಕರಪತ್ರ ಬಿಡುಗಡೆಗೊಳಿಸಿದರು. ಸುಭಾಸ ಪಾಟೀಲ, ಗೋವಿಂದ ಕೊಪ್ಪದ ಇತರರಿದ್ದರು.
ಗೋಕಾಕ ಎನ್‌ಎಸ್‌ಎ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಬಿಎಲ್‌ಎ-2 ಕಾರ್ಯಾಗಾರ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ ಸಭೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಕರಪತ್ರ ಬಿಡುಗಡೆಗೊಳಿಸಿದರು. ಸುಭಾಸ ಪಾಟೀಲ, ಗೋವಿಂದ ಕೊಪ್ಪದ ಇತರರಿದ್ದರು.
Published on
ಗೋಕಾಕ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿ ನಾಯಕತ್ವದ ಲವಾಗಿ ಜಾಗತಿಕ ಮಟ್ಟದಲ್ಲಿ ಭಾರತ ಬಲಾಢ್ಯವಾಗುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಇಲ್ಲಿನ ಎನ್‌ಎಸ್‌ಎಫ್ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಕಾರ್ಯಾಗಾರ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ ಸಭೆ ಉದ್ಘಾಟಿಸಿ ಮಾತನಾಡಿದರು.ಬಿಹಾರದಲ್ಲಿ ಮತ್ತೊಂದು ಅವಧಿಗೆ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದಿದೆ. ಬಿಜೆಪಿಗೆ ಸೋಲು ಎನ್ನುವವರಿಗೆ ಮತದಾರರು ತಕ್ಕ ಉತ್ತರ ನೀಡುವ ಮೂಲಕ
ಮೋದಿ-ನಿತೀಶ್‌ಕುಮಾರ ಆಡಳಿತಕ್ಕೆ ಮತ್ತೆ ಜೈ ಎಂದಿದ್ದಾರೆ. ಇದರಿಂದ ಮೋದಿ ಅವರ ಸಾಮರ್ಥ್ಯ ಮತ್ತೊಮ್ಮೆ ಇಡೀ ದೇಶಕ್ಕೆ ಗೊತ್ತಾಗಿದೆ ಎಂದರು.
ಲಭಿಸಲಿದೆ. ಇನ್ನೊಂದೆಡೆ ಅನರ್ಹ ಮತದಾರರನ್ನು ಹೊರಗೆ ಕಳಿಸಲು ಸಹಕಾಯಕವಾಗುತ್ತದೆ ಎಂದರು.
ಈಗಾಗಲೇ ಕ್ಷೇತ್ರದಲ್ಲಿ 281 ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆ ಕೇಂದ್ರದಲ್ಲಿ ಯೋಗ್ಯ ಮತದಾರರನ್ನು ಗುರುತಿಸಬೇಕು. ಮೃತಪಟ್ಟವರ ಹೆಸರು ತೆಗೆಸಬೇಕು. ಎರಡೆರಡು ಕಡೆಗಳಲ್ಲಿ ಮತ ಚಲಾಯಿಸುವವರನ್ನು ಪಟ್ಟಿಯಿಂದ ಕೈ ಬಿಡಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು. ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ, ಮುಖಂಡರಾದ ಗೋವಿಂದ ಕೊಪ್ಪದ, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಯಲ್ಲೇಶ ಕೊಲಕಾರ, ಪರಸಪ್ಪ ಬಬಲಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net