ಮಕ್ಕಳಲ್ಲಿ ಉತ್ತಮ ಮೌಲ್ಯ ಬೆಳೆಸಿ

ಯಕ್ಸಂಬಾ ಪಟ್ಟಣದ ಶಿವಶಂಕರ ಜೊಲ್ಲೆ ಇಂಗ್ಲಿಷ್ ಮೀಡಿಯಂ ಪಬ್ಲಿಕ್ ಸ್ಕೂಲ್‌ನಲ್ಲಿ ಆಯೋಜಿಸಿದ್ದ ವಾರ್ಷಿಕ ಸ್ನೇಹಸಮ್ಮೇಳನವನ್ನು ಅಣ್ಣಾಸಾಹೇಬ ಜೊಲ್ಲೆ, ಡಾ.ಪಂಚಮ ಶಿವಲಿಂಗೇಶ್ವರ ಶ್ರೀಗಳು ಉದ್ಘಾಟಿಸಿದರು. ಶಶಿಕಲಾ ಜೊಲ್ಲೆ, ಜ್ಯೋತಿಪ್ರಸಾದ ಜೊಲ್ಲೆ, ಬಸವಪ್ರಸಾದ ಜೊಲ್ಲೆ, ಸಂಜಯ ಪಾಟೀಲ, ಪ್ರಿಯಾ ಜೊಲ್ಲೆ, ಯಶಸ್ವಿನಿ ಜೊಲ್ಲೆ ಇತರರಿದ್ದರು.
ಯಕ್ಸಂಬಾ ಪಟ್ಟಣದ ಶಿವಶಂಕರ ಜೊಲ್ಲೆ ಇಂಗ್ಲಿಷ್ ಮೀಡಿಯಂ ಪಬ್ಲಿಕ್ ಸ್ಕೂಲ್‌ನಲ್ಲಿ ಆಯೋಜಿಸಿದ್ದ ವಾರ್ಷಿಕ ಸ್ನೇಹಸಮ್ಮೇಳನವನ್ನು ಅಣ್ಣಾಸಾಹೇಬ ಜೊಲ್ಲೆ, ಡಾ.ಪಂಚಮ ಶಿವಲಿಂಗೇಶ್ವರ ಶ್ರೀಗಳು ಉದ್ಘಾಟಿಸಿದರು. ಶಶಿಕಲಾ ಜೊಲ್ಲೆ, ಜ್ಯೋತಿಪ್ರಸಾದ ಜೊಲ್ಲೆ, ಬಸವಪ್ರಸಾದ ಜೊಲ್ಲೆ, ಸಂಜಯ ಪಾಟೀಲ, ಪ್ರಿಯಾ ಜೊಲ್ಲೆ, ಯಶಸ್ವಿನಿ ಜೊಲ್ಲೆ ಇತರರಿದ್ದರು.
Published on
ಚಿಕ್ಕೋಡಿ: ಶಿಕ್ಷಣ ಅಂಕಗಳಿಗೆ ಸೀಮಿತವಾಗದೆ, ಮಕ್ಕಳಿಗೆ ಉದಾತ್ತ ಮೌಲ್ಯ ಕಲಿಸಿಕೊಡಬೇಕು. ಗಡಿಭಾಗದ ಜೊಲ್ಲೆ ಶಿಕ್ಷಣ ಸಂಸ್ಥೆಯು ಒಳ್ಳೆಯ ಶಿಕ್ಷಣ ಜತೆ ಎಲ್ಲ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ನಿಡಸೋಸಿ ಸಿದ್ಧಸಂಸ್ಥಾನ ಮಠದ ಡಾ.ಪಂಚಮ ಶಿವಲಿಂಗೇಶ್ವರ ಶ್ರೀಗಳು ಹೇಳಿದರು.
ಯಕ್ಸಂಬಾ ಪಟ್ಟಣದ ಶಿವಶಂಕರ ಜೊಲ್ಲೆ ಇಂಗ್ಲಿಷ್ ಮೀಡಿಯಂ ಪಬ್ಲಿಕ್ ಸ್ಕೂಲ್‌ನಲ್ಲಿ 14ನೇ ಪ್ರೇರಣಾ ಉತ್ಸವದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ವಾರ್ಷಿಕ ಸ್ನೇಹಸಮ್ಮೇಳನದ ದಿವ್ಯಸಾನ್ನಿಧ್ಯ ವಹಿಸಿ ಮಾತನಾಡಿದರು.
ಸಂಸ್ಕೃತಿ ಮತ್ತು ಸದಾಚಾರ ಮೈಗೂಡಿಸಿಕೊಂಡ ಮಕ್ಕಳು ದೇಶದ ನಿಜವಾದ ಆಸ್ತಿಯಾಗುತ್ತಾರೆ. ಗಡಿ ಭಾಗದಲ್ಲಿ ಉತ್ತಮ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಜೊಲ್ಲೆ ಕುಟುಂಬ ಸಮಾಜಕ್ಕೆ ದೊಡ್ಡ ಕೊಡುಗೆ ನೀಡುತ್ತಿದೆ ಎಂದರು.
ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳು ಗುರಿ ತಲುಪಲು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಅಧ್ಯಯನ ಮಾಡಬೇಕು. ಮನೆಯಲ್ಲಿ ಉತ್ತಮ ಸಂಸ್ಕಾರ ಕೊಟ್ಟಾಗ ಮಾತ್ರ ಮಕ್ಕಳಲ್ಲಿ ಶಿಸ್ತು ಸಂಯಮ, ನೈತಿಕ ಮೌಲ್ಯಗಳು ವೃದ್ಧಿಯಾಗುತ್ತವೆ ಎಂದರು.
ಚಿಕ್ಕೋಡಿ ಸಂಪಾದನಾ ಚರಮೂರ್ತಿ ಮಠದ ಸಂಪಾದನಾ ಶ್ರೀಗಳು ಮಾತನಾಡಿ, ಕೇವಲ ವ್ಯಕ್ತಿಗತ ಏಳಿಗೆಯಲ್ಲದೆ, ಬಡವರು ಮತ್ತು ಸಂಕಷ್ಟದಲ್ಲಿರುವವರ ಸೇವೆ ಮಾಡುವುದು ದೈವಿಕ ಕಾರ್ಯ. ಯಾವಾಗಲೂ ಸತ್ಯದ ಹಾದಿಯಲ್ಲಿ ನಡೆಯಬೇಕು. ಅಧರ್ಮ ವಿರೋಧಿಸಬೇಕೆಂದರು. ಮಾಜಿ ಸಂಸದ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ, ಮಾಜಿ ಶಾಸಕ ಸಂಜಯ ಪಾಟೀಲ, ಜ್ಯೋತಿಪ್ರಸಾದ ಮತ್ತು ಪ್ರಿಯಾ ಜೊಲ್ಲೆ, ಬಸವಪ್ರಸಾದ ಮತ್ತು ಯಶಸ್ವಿನಿ ಜೊಲ್ಲೆ, ಸಂಯೋಜಕ ಮಹಾದೇವ ಪಾಟೀಲ ಇತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net