ಬೈಲಹೊಂಗಲ ಕೆಆರ್‌ಸಿಇಎಸ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಪುರಸ್ಕಾರ ದೊರೆತ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ, ಸಂಜಯ ಗಡತರನವರ, ಎಸ್.ಎನ್.ಪಾಟೀಲ, ಎಂ.ವಿ.ವಾಲಿ, ರಿತೇಶ್ ತುಡವೇಕರ ಇತರರಿದ್ದರು.
Published on:
Copied
Follow Us
ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸೇವಾ ಮನೋಭಾವ ಮತ್ತು ನಾಯಕತ್ವ ಬೆಳೆಸುವಲ್ಲಿ ಸ್ಕೌಟ್ಸ್-ಗೈಡ್ಸ್ ಪಾತ್ರ ಶ್ಲಾಘನೀಯ ಎಂದು ಕೆಆರ್‌ಸಿಇಎಸ್ ಸಂಸ್ಥೆಯ ಅಧ್ಯಕ್ಷ, ಮಾಜಿ ಶಾಸಕ ಡಾ.ವಿ.ಐ.ಪಾಟೀಲ ಹೇಳಿದರು.
ನಗರದ ಕೆಆರ್‌ಸಿಇಎಸ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲಾ 18 ಸ್ಕೌಟ್ಸ್, 21 ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪುರಸ್ಕಾರ ದೊರೆತಿರುವ ಹಿನ್ನೆಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರಮಾಣ ಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪಾಲನೆ, ಸೇವಾ ಮನೋಭಾವ, ದೇಶಭಕ್ತಿ, ನಾಯಕತ್ವ ಗುಣ ಹಾಗೂ ಸಾಮಾಜಿಕ ಜವಾಬ್ದಾರಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಮಾಜ ಸೇವೆ ಮತ್ತು ರಾಷ್ಟ್ರ ನಿರ್ಮಾಣದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಪ್ರಾಚಾರ್ಯ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಅಧಿಕಾರಿ ಮಲ್ಲಿಕಾರ್ಜುನ ಬಿರಾದಾರ ಮಾತನಾಡಿ, ಸಾವಿರಾರು ವಿದ್ಯಾರ್ಥಿಗಳಲ್ಲಿ ಉತ್ತಮ ಸಾಧನೆ
ತರಬೇತುದಾರ ಶಿಕ್ಷಕರಿಗೆ ದೊರೆತ ಪುರಸ್ಕಾರದಿಂದ ಸಂಸ್ಥೆಯ ಗೌರವ ಹೆಚ್ಚಿದೆ ಎಂದರು.
ರಾಜ್ಯ ಪುರಸ್ಕಾರಕ್ಕೆ ಆಯ್ಕೆಯಾದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಾಗೂ ಉನ್ನತ ಶ್ರೇಣಿಯ ಹಿಮಾಲಯ ಬ್ಯಾಚ್ ಪುರಸ್ಕಾರ ಪಡೆದಿರುವ ಶಿಕ್ಷಕರಾದ ಚನ್ನಬಸಪ್ಪ ಕರ್ಕಿ, ಮಂಜುನಾಥ ಸೂರ್ಯವಂಶಿ, ಮಲ್ಲಿಕಾರ್ಜುನ ಶಲ್ಲಿಕೇರಿ ಮತ್ತು ಶ್ರೀದೇವಿ ಮಲ್ಲೂರ ಅವರಿಗೆ ಸಂಸ್ಥೆಯ ಕಾರ್ಯದರ್ಶಿ ಸಂಜಯ ಗಡತರನವರ, ನಿರ್ದೇಶಕ ಎಸ್.ಎನ್.ಪಾಟೀಲ, ಎಂ.ವಿ.ವಾಲಿ, ರಿತೇಶ್ ತುಡವೇಕರ ಪ್ರಮಾಣಪತ್ರ ವಿತರಿಸಿದರು.