ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮಾದವರೊಂದಿಗೆ ಮಾತನಾಡಿದ ಅವರು, ಬಿಡಿಸಿಸಿ ಬ್ಯಾಂಕ್ ರೈತರ ಬ್ಯಾಂಕು. ಬ್ಯಾಂಕ್ ನಿಂದ ರೈತರಿಗೆ ಸಾಲ ನೀಡಲೇಬೇಕು. ಆದರೆ ಆರ್ ಬಿಐ, ನಬಾರ್ಡ್ ನಿರ್ದೇಶನದಂತೆ ಮಾತ್ರ ಸಾಲ ನೀಡಬೇಕಾಗುತ್ತದೆ. ಇನ್ನು ಬ್ಯಾಂಕ್ ಅಭಿವೃದ್ಧಿ ದೃಷ್ಠಿಯಿಂದ ಸಕ್ಕರೆ ಕಾರ್ಖಾನೆಗಳು ಸೇರಿದಂತೆ ಖಾಸಗಿಯವರಿಗೂ ಸಾಲ ನೀಡುತ್ತಿದ್ದಾರೆಂದು ತಿಳಿಸಿದರು.