ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಳಿಸುವಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ದೊರೆತಿದೆ. ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಶಿಕ್ಷಕರು ಹಗಲಿರುಳು ಶ್ರಮಿಸಿದ್ದಾರೆ. ನಾಗರಿಕರು, ಮೇಯರ್, ಉಪಮೇಯರ್, ನಗರಸೇವಕರು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಮಾಧ್ಯಮದವರು ಸಹಕಾರ ನೀಡಿದ್ದಾರೆ ಎಂದು ಕಾರ್ತಿಕ್ ಎಂ. ಕೃತಜ್ಞತೆ ಸಲ್ಲಿಸಿದರು.